fbpx
ಸಮಾಚಾರ

ಹಳೆಯ 12 ಜನ ಸ್ಪರ್ಧಿಗಳ ಜೊತೆ ಹೊಸ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿ

ಅರ್ಧಕ್ಕೆ ನಿಂತಿದ್ದ ಕನ್ನಡ ಬಿಗ್​ ಬಾಸ್ ಸೀಸನ್​ 8 ಪುನರಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ದಿನಾಂಕ ಕೂಡ ಫೈನಲ್​ ಆಗಿದ್ದು, ಜೂನ್​ 21ರಿಂದ ಶೋ ಮುಂದುವರಿಯಲಿದೆ.

ಕೋವಿಡ್ ಎರಡನೇ ಅಲೆಯ ತೀವ್ರತೆಯ ಕಾರಣ 71 ದಿನಗಳಿಗೆ ಬಿಗ್ ಬಾಸ್ ಅರ್ಧಕ್ಕೆ ನಿಂತಿತ್ತು.. ಈಗ ಪೂರ್ತಿ ನೂರು ದಿನಗಳನ್ನು ಪೂರೈಸುವ ಯೋಜನೆ ವಾಹಿನಿಯದ್ದು. ಹೀಗಾಗಿ ಈಗ ಮತ್ತೆ  28 ದಿನಗಳ ಕಾಲ ಮತ್ತೆ ಶೋ ಪ್ರಸಾರ ಮಾಡುವ ಅಥವಾ 40 ದಿನಗಳಿಗೆ ಶೋ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಬ್ಬರು ಹೊಸ ಸ್ಪರ್ದಿಗಳು:
ಹಳೆಯ 12 ಮಂದಿ ಸ್ಪರ್ಧಿಗಳ ಜತೆಗೆ ಇಬ್ಬರು ಹೊಸ ಸ್ಪರ್ಧಿಗಳನ್ನೂ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಗಳೂ ಇವೆ ಎನ್ನಲಾಗುತ್ತಿದೆ. ಈ ಹೊಸ ಸ್ಪರ್ಧಿಗಳು ಯಾರೆಂಬುದು ಇನ್ನಷ್ಟೆ ಗೊತ್ತಾಗಬೇಕಿದೆ.

ಅರ್ಧದಲ್ಲೇ ನಿಂತಿದ್ದ ಬಿಗ್‍ಬಾಸ್ ಮತ್ತೆ ಪ್ರಾರಂಭವಾಗಲಿದೆ. ಬಿಗ್‍ಬಾಸ್ ಪ್ರಸಾರವಾಗುವ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಮಾಹಿತಿಯನ್ನು ನೀಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಗುಂಡ್ಕಲ್ ಫೇಸ್ಬುಕ್ ಪೋಸ್ಟ್ ನಲ್ಲಿ ಏನಿದೆ?
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.

 


 

ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್‍ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು.. ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.

ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ 😊

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top