fbpx
ಸಮಾಚಾರ

ರಾಜ್ಯಕ್ಕೆ ‘ಅಚ್ಚರಿಯ ಮುಖ್ಯಮಂತ್ರಿ’ ಯತ್ನಾಳ್ ಆಗುತ್ತಾರಾ?

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಸುತ್ತ ಗೊಂದಲ ಮುಂದುವರಿದಿದೆ. ಹಾಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸಿದರೆ ರಾಜೀನಾಮೆ ನಿರ್ಧಾರಕ್ಕೆ ಬಂದಂತೆ ಭಾಸವಾಗುತ್ತಿದೆ. ಹಾಗೊಮ್ಮೆ ಸಿಎಂ ಬದಲಾವಣೆಗೆ ಬಿಜೆಪಿ ಹೈಕಮಾಂಡ್‌ ಕೈ ಹಾಕಿದರೆ ಆ ಸ್ಥಾನ ಅಲಂಕರಿಸುವವರು ಯಾರು? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ? ಈ ಕುರಿತ ಸಂಕ್ಷಿಪ್ತ ವಿವರ ಇಲ್ಲಿದೆ.

ಜುಲೈ 25 ರಂದು ಬಿಜೆಪಿ ಹೈಕಮಾಂಡ್ ನಿಂದ ಸಂದೇಶ ಬರುತ್ತೆ. ಜುಲೈ 26 ರಂದು ಹೈಕಮಾಂಡ್ ಸಂದೇಶದ ಪ್ರಕಾರ ನಡೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಇಂದು ಬೆಂಗಳೂರಿನ ಕಾಚರಕನಹಳ್ಳಿಯಲ್ಲಿ ಹೇಳಿದ್ದಾರೆ. ಇದರಿಂದಾಗಿ ಜುಲೈ 25 ರಂದೇ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ದಿನ, ಮುಹೂರ್ತ ನಿಗದಿಪಡಿಸಿ ತಿಳಿಸಬಹುದು.

ಈಗ ಕರ್ನಾಟಕದಲ್ಲಿ ಯಡಿಯೂರಪ್ಪ ನಂತರ ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆ ಕಾಡುತ್ತಿದೆ. ಈಗ ಬಿಜೆಪಿ ಹೈಕಮಾಂಡ್ ಮುಂದೆ ಬಿಜೆಪಿಯ ಕೆಲ ನಾಯಕರ ಹೆಸರುಗಳಿವೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿ.ಟಿ. ರವಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ ಹೆಸರುಗಳಿವೆ.

ಇವರೆಲ್ಲರನ್ನೂ ಹೊರತುಪಡಿಸಿ ಅಚ್ಚರಿಯ ಮುಖ್ಯಮಂತ್ರಿಯನ್ನು ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ. ಆ ಅಚ್ಚರಿಯ ಹೆಸರು ಯಾವುದೆಂದರೆ ಬಸನಗೌಡ ಪಾಟೀಲ್ ಯತ್ನಾಳ್. ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಹಾಗೂ ಮುಖ್ಯಮಂತ್ರಿ ಬದಲಾವಣೆ ಮಾಡುವ ಬಗ್ಗೆ ಸಾರ್ವಜನಿಕವಾಗಿಯೇ ಹೇಳಿಕೆಗಳನ್ನು ನೀಡುತ್ತಿದ್ದ ಈಗ ಕರ್ನಾಟಕದ ಸಿಎಂ ಕುರ್ಚಿಯ ಮೇಲೆ ಇರುವ ಎಲ್ಲಾ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ ಭಾಗದ ಪ್ರಬಲ ನಾಯಕರಾಗಿರುವ ಯತ್ನಾಳ್ ಲಿಂಗಾಯತ ಸಮುದಾಯದಲ್ಲಿ ಕೂಡ ತಮ್ಮ ಪ್ರಭಾವವನ್ನು ಇಟ್ಟುಕೊಂಡಿದ್ದಾರೆ. ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿದ್ದ ಯತ್ನಾಳ್ ಈಗ ಕರ್ನಾಟಕದ ಮುಖ್ಯಮಂತ್ರಿ ಯಾದರೆ ಅಚ್ಚರಿಪಡಬೇಕಾಗಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಒಟ್ಟಿನಲ್ಲಿ ಯಡಿಯೂರಪ್ಪನವರ ನಂತರ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗುತ್ತಾರಾ ಎಂಬುದನ್ನು ಕಾದುನೋಡಬೇಕಾಗಿದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top