fbpx
ಸಮಾಚಾರ

“ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗೋದು ನನಗೆ ಇಷ್ಟವಿಲ್ಲ” ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಿ ಕೆಲಸ ಮಾಡುವುದಕ್ಕೆ ಇಚ್ಛಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾನು ಸಿಎಂ ಆಗಿದ್ದವನು, ಹಾಗಾಗಿ ನೂತನ ಸಿಎಂ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸಚಿವ ನಾಗಿ ಕೆಲಸ ಮಾಡೋದು ಬೇಡ ಎಂಬುದಾಗಿ ನಿರ್ಧಾರ ಮಾಡಿದ್ದೀನಿ ಎಂದು ಹೇಳಿದ್ದಾರೆ

ಈ ಬಾರಿಯ ಸಂಪುಟದಲ್ಲಿ ಸೇರ್ಪಡೆಯಾಗಬಾರದೆಂಬ ನಿರ್ಧಾರ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಈ ಹಿಂದೆ ಯಡಿಯೂರಪ್ಪನವರ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ಮಾಜಿ ಸಿಎಂ ಆಗಿದ್ದರೂ ಕಳೆದ ಬಾರಿ ಯಡಿಯೂರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದೆ. ಇದು ನನ್ನ ವೈಯಕ್ತಿಯ ನಿರ್ಧಾರವಾಗಿದ್ದು, ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ. ನನ್ನ ಅಭಿಪ್ರಾಯವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾದ ನಳೀನ್​ ಕುಮಾರ್​ ಕಟೀಲ್​ ಮತ್ತು ಹೈಕಮಾಂಡ್ ಗೆ ಈಗಾಗಲೇ ತಂದಿದ್ದೇನೆ ಎಂದು ಹೇಳಿದರು.

ಹೊಸ ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆ ಪ್ರಕ್ರಿಯೆ ಆರಂಭಗೊಂಡಿದೆ. ಆದು ಯಾವಾಗಾ ಪೂರ್ಣಗೊಳ್ಳುತ್ತೋ ಗೊತ್ತಿಲ್ಲ. ನಾನೊಬ್ಬ ಹಿರಿಯ ನಾಯಕನಾಗಿದ್ದರಿಂದ ಬೊಮ್ಮಾಯಿ ಸಂಪುಟ ಸೇರ್ಪಡೆಯಾಗದಿರಲು ತೀರ್ಮಾನಿಸಿದ್ದೇನೆ. ಬೇರೆ ಯಾವ ಹುದ್ದೆಗೂ ನಾನು ಆಕಾಂಕ್ಷಿಯಲ್ಲ. ಒಂದು ವೇಳೆ ಪಕ್ಷದ ಹೈಕಮಾಂಡ್ ಯಾವುದಾದ್ರೂ ಕೆಲಸ ನೀಡಿದ್ರೆ ಮಾಡುತ್ತೇನೆ ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top