ಅಘ್ಘಾನಿಸ್ತಾನ ತಾಲಿಬಾನಿಗಳ ಕೈವಶವಾಗುತ್ತಿದ್ದಂತೆ ಜನ ಭಯಗೊಂಡು ದೇಶ ತೊರೆಯಲು ಸಿಕ್ಕ ಸಿಕ್ಕ ವಿಮಾನ ಹತ್ತಲು ಪ್ರಾರಂಭಿಸಿದ್ದರು. ಈ ವೇಳೆ ಅಮೆರಿಕಾಗೆ ತೆರಳಲುತ್ತಿದ್ದ ವಿಮಾನ ಟೇಕಾಫ್ ಗೊಂಡ ಕೆಲವೇ ನಿಮಿಷಗಳಲ್ಲಿ ವಿಮಾನದ ಮೇಲಿಂದ ಮೂವರು ಬಿದ್ದಿದ್ದರು. ಇದೀಗ ಅವರ ಗುರುತು ಪತ್ತೆಯಾಗಿದ್ದು, ಮೂವರಲ್ಲಿ ಓರ್ವ ಅಘ್ಘಾನ್ನ ಯುವ ಫುಟ್ಬಾಲ್ ಆಟಗಾರ ಎಂದು ವರದಿಯಾಗಿದೆ.
19-year-old #Afghan footballer #ZakiAnwari was among those who fell from US C-17 aircraft rescuing people from #Taliban-ruled region pic.twitter.com/6EB3lbSTI3
— editorji (@editorji) August 20, 2021
ಹೌದು 19 ವರ್ಷದ ಝಾಕಿ ಅನ್ವಾರಿ ಆಟಗಾರ ದುರಂತ ಅಂತ್ಯ ಕಂಡಿದ್ದಾನೆ. ಅನ್ವರಿ ಸಾವನ್ನು ಅಫ್ಘಾನಿಸ್ತಾನದ ದೈಹಿಕ ಶಿಕ್ಷಣ ಮತ್ತು ಕ್ರೀಡೆಗಳ ಜನರಲ್ ಡೈರೆಕ್ಟರೇಟ್ ದೃಢಪಡಿಸಿದೆ. 16 ವರ್ಷದವನಿದ್ದಾಗಿನಿಂದ ಅನ್ವರಿ ಅಫ್ಘಾನ್ ರಾಷ್ಟ್ರೀಯ ಯುವ ತಂಡದಲ್ಲಿ ಆಡುತ್ತಿದ್ದು ಗೆಳೆಯರು ಮತ್ತು ತರಬೇತುದಾರರಿಗೆ ಪ್ರೀತಿಪಾತ್ರರಾಗಿದ್ದನು.
ವಲಿ ಸಾಲೆಕ್ ಎಂಬವರ ಮನೆ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯಾಹ್ನ ಎರಡು ಗಂಟೆ ನಂತ್ರ ವಿಶ್ರಾಂತಿ ಪಡೆಯುತ್ತಿದ್ದೆ. ಆಗ ಮೇಲಿನಿಂದ ಏನೋ ಬಿದ್ದಂತೆ ಆಯ್ತು. ನಾವು ಟೈರ್ ಸ್ಫೋಟಗೊಂಡು ಮನೆಯ ಮೇಲೆ ಬಂದಿದೆಯಾ ಅಂತ ನೋಡಲು ಹೋದೆ. ನನ್ನೊಂದಿಗೆ ಮಗಳು ಮತ್ತು ಪತ್ನಿ ಸಹ ಬಂದರು. ಮೇಲೆ ನೋಡಿದ್ರೆ ಇಬ್ಬರ ಶವಗಳು ಎರಡು ತುಂಡಾಗಿದ್ದವು. ಈ ಭೀಕರ ದೃಶ್ಯ ಕಂಡ ಪತ್ನಿ ಮತ್ತು ಮಗಳು ಮೂರ್ಛೆ ಹೋದರು ಎಂದು ವಲಿ ಹೇಳ್ತಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
