ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರಸ್ವಾಮೀಜಿ ಅವರು ಲಿಂಗೈಕ್ಯರಾದ ಜನವರಿ 21ರಂದು ರಾಜ್ಯದಾದ್ಯಂತ ‘ದಾಸೋಹ ದಿನ’ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಈ ಸಂಬಂಧ ರೂಪುರೇಷೆ ಸಿದ್ಧಪಡಿಸಿಕೊಳ್ಳಲು ಆದೇಶ ಹೊರಡಿಸಿದೆ.
ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಲಿಂಗೈಕ್ಯರಾದ ಶಿವಕುಮಾರ ಸ್ವಾಮೀಜಿ ಅವರ ಅಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ ಜನವರಿ 21 ರಂದು ಸರ್ಕಾರದ ವತಿಯಿಂದ ದಾಸೋಹ ದಿನವೆಂದು ಆಚರಿಸಲು ನಿರ್ಧರಿಸಲಾಗಿದೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಾಗ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ 2ನೇ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ಈದಾಸೊಹ ದಿನದ ಘೋಷಣೆ ಮಾಡಿದ್ದರು. ಇದೀಗ ಈ ದಾಸೋಹ ದಿನದ ಆಚರಣೆಗೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
