ರಾಜ್ಯದಲ್ಲಿ ಇಂದು 790 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಮಹಾಮಾರಿ 15 ಜನರನ್ನು ಬಲಿ ಪಡೆದಿದ್ದು, 790 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,56,988 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 37,441 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 29,02,089 ಮಂದಿ ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 17,432 ಸಕ್ರಿಯ ಪ್ರಕರಣಗಳಿವೆ.
ಇಂದು ಬೆಂಗಳೂರಿನಲ್ಲಿ 248 ಹೊಸ ಪ್ರಕರಣಗಳು ವರದಿಯಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 227, ಉಡುಪಿ 74, ಮೈಸೂರು 53, ಚಿಕ್ಕಮಗಳೂರು 49, ತುಮಕೂರು ಜಿಲ್ಲೆಯಲ್ಲಿ 44 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಒಟ್ಟು 1,18,791 ಸ್ಯಾಂಪಲ್ (ಆರ್ ಟಿ ಪಿಸಿಆರ್ 81,391 + 37,400 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 248 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 3 ಜನ ಮರಣ ಹೊಂದಿದ್ದಾರೆ. 362 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
