fbpx
ಸಮಾಚಾರ

ನಿಖಿಲ್ ಪತ್ನಿ ರೇವತಿಗೆ ಸೀಮಂತ ಸಂಭ್ರಮ: ಇಲ್ಲಿವೆ ಸುಂದರ ಫೋಟೋಗಳು

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಷಯ ಇತ್ತೀಚೆಗಷ್ಟೆ ಬಹಿರಂಗವಾಗಿತ್ತು. ಈ ವಿಷಯ ತಿಳಿದಾಗ ಅಭಿಮಾನಿಗಳು ಫುಲ್ ಖುಷಿಯಾಗಿದ್ದರು. ಈಗ ತುಂಬು ಗರ್ಭಿಣಿ ರೇವತಿ ಅವರ ಸೀಮಂತ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲಾಗಿದೆ.

 

 

ಎಚ್​ಎಸ್​ಆರ್​ ಲೇಔಟ್​ನಲ್ಲಿ ಇರುವ ಮಾನ್ವಿ ಕನ್ವೆನ್ಷನ್ ಹಾಲ್​ನಲ್ಲಿ ನಿಖಿಲ್​ ಪತ್ನಿ ರೇವತಿಗೆ ಸೀಮಂತ ಕಾರ್ಯಕ್ರಮ ಮಾಡಲಾಗುತ್ತಿದೆ. ಇಂದು (ಸೆ.13) ಈ ಕಾರ್ಯ ನಡೆಯುತ್ತಿದ್ದು, ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕೊವಿಡ್​ ನಿಯಮಾವಳಿ ಹಿನ್ನೆಲೆಯಲ್ಲಿ ಹೆಚ್ಚಿನವರನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಕುಟುಂಬದ ಆಪ್ತರು ಈ ಸೀಮಂತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

 

 

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top