ಶ್ರೀಲಂಕಾದ ಹಿರಿಯ ವೇಗದ ಬೌಲರ್ ಲಸಿತ್ ಮಾಲಿಂಗ ಅವರು ಟಿ 20 ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದು, ಎಲ್ಲಾ ಪ್ರಕಾರದ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ.
ಈ ವಿಚಾರವನ್ನು ಸ್ವತಃ ಮಾಲಿಂಗ ಅವರೇ ಘೋಷಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ. ” ನನ್ನ ಪ್ರಯಾಣದಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಮತ್ತು ಮುಂದಿನ ವರ್ಷಗಳಲ್ಲಿ ಯುವ ಕ್ರಿಕೆಟಿಗರೊಂದಿಗೆ ನನ್ನ ಅನುಭವವನ್ನು ಹಂಚಿಕೊಳ್ಳಲು ಎದುರು ನೋಡುತ್ತಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.
Hanging up my #T20 shoes and #retiring from all forms of cricket! Thankful to all those who supported me in my journey, and looking forward to sharing my experience with young cricketers in the years to come.https://t.co/JgGWhETRwm #LasithMalinga #Ninety9
— Lasith Malinga (@ninety9sl) September 14, 2021
ಮಾಲಿಂಗ ಅವರು ಐಪಿಎಲ್ ನಲ್ಲಿ ಮುಂಬೈ ತಂಡದ ಪರ ಆಡುತ್ತಿದ್ದರು. ಯಾರ್ಕರ್ ಸ್ಪೆಷಲಿಸ್ಟ್ ತಮ್ಮ ಕರಾರುವಕ್ಕಾದ ದಾಳಿಯ ಮೂಲಕ ಏಕಾಂಗಿಯಾಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಡೆತ್ ಓವರ್ಗಳಲ್ಲಿ ಪರಿಣಾಮಕಾರಿ ದಾಳಿ ನಡೆಸಿ ಪಂದ್ಯ ಮುಂಬೈನತ್ತ ವಾಲುವಂತೆ ಮಾಡಿದ್ದಾರೆ
ಮಾಲಿಂಗ ಶ್ರೀಲಂಕಾ ಪರ 30 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 101 ವಿಕೆಟ್ ಉರುಳಿಸಿ ಮಿಂಚಿದ್ದರು. ಇನ್ನು 226 ಏಕದಿನ ಪಂದ್ಯಗಳಿಂದ 338 ವಿಕೆಟ್ ಹಾಗೂ 83 ಟಿ20 ಪಂದ್ಯಗಳಲ್ಲಿ 107 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದ ಲಸಿತ್ ಮಾಲಿಂಗ 122 ಪಂದ್ಯಗಳಿಂದ 170 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.
ಇನ್ನು ಈ ಬಾರಿ ಐಪಿಎಲ್ನಿಂದಲೂ ಲಸಿತ್ ಮಾಲಿಂಗ ಹೊರಗುಳಿದಿದ್ದರು. ವೈಯುಕ್ತಿಕ ಕಾರಣಗಳಿಂದಾಗಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿಲ್ಲ ಎಂದು ತಿಳಿಸಿದ್ದರು. ಹೀಗಾಗಿ ಮಾಲಿಂಗ ಮೊದಲಾರ್ಧದಲ್ಲಿ ಕಾಣಿಸಿಕೊಂಡಿರಲಿಲ್ಲ. ಅತ್ತ ಮುಂಬೈ ಇಂಡಿಯನ್ಸ್ ಈ ಬಾರಿ ದ್ವಿತಿಯಾರ್ಧದಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
