ಕೇಂದ್ರ ಸರಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೆ ತರುವುದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು ಸಾರ್ವಜನಿಕರ ಕಣ್ಣು ಕೆಂಪಗಾಗಿಸಿದೆ. ಈ ಮದ್ಯೆ ಸಂಸದ ಜಿಸಿ ಚಂದ್ರಶೇಖರ್ ಅವರು ಕೂಡ ಸರ್ಕಾರದ ನಡೆಗೆ ಕಿಡಿಕಾರಿದ್ದು ವಿವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ.
ರಾಜ್ಯದ ಶಿಕ್ಷಣ ತಜ್ಞರು, ವಿಧಾನಸಭೆಯಲ್ಲಿ ಸಾಧಕ-ಬಾಧಕಗಳ ಚರ್ಚೆ ನಡೆದು ಪರಿಶೀಲನೆ ನಡೆಸಿ ಒಂದು ಉತ್ತಮ ನಿರ್ಧಾರಕ್ಕೆ ಬರಬಹುದಿತ್ತು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ತರಾತುರಿಯಲ್ಲಿ NEP ನಿರ್ಧಾರವನ್ನು ತೆಗೆದುಕೊಳ್ಳದೆ ಇದನ್ನು ಪ್ರಶ್ನಿಸುವ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಸಲ್ಲದು, 1/1 pic.twitter.com/CLPyxBFsnP
— GC ChandraShekhar (@GCC_MP) September 14, 2021
ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಅವ್ರು ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ರಾಜ್ಯದ ಶಿಕ್ಷಣ ತಜ್ಞರು, ವಿಧಾನಸಭೆಯಲ್ಲಿ ಸಾಧಕ-ಬಾಧಕಗಳ ಚರ್ಚೆ ನಡೆದು ಪರಿಶೀಲನೆ ನಡೆಸಿ ಒಂದು ಉತ್ತಮ ನಿರ್ಧಾರಕ್ಕೆ ಬರಬಹುದಿತ್ತು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ತರಾತುರಿಯಲ್ಲಿ NEP ನಿರ್ಧಾರವನ್ನು ತೆಗೆದುಕೊಳ್ಳದೆ ಇದನ್ನು ಪ್ರಶ್ನಿಸುವ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಸಲ್ಲದು”
“ಕೇಂದ್ರ ಮಾಡಿದ ಎಲ್ಲ ನಿಯಮಗಳನ್ನು ಕುರುಡಾಗಿ ರಾಜ್ಯ ಒಪ್ಪುತ್ತಿದೆ ಈ ಹಿಂದೆ GST ಲೋನ್ ತೆಗೆದುಕೊಳ್ಳುವುದರಲ್ಲಿ ರಾಜ್ಯವೇ ಮೊದಲು ಹಾಗು ಶಿಕ್ಷಣ ನೀತಿಯನ್ನು ರಾಜ್ಯದ ವಿಷಯವಾಗಿ Concurrent list ನಲ್ಲೆ ಉಳಿಸಿಕೊಳ್ಳುವ ನಿರ್ಧಾರಕ್ಕೆ ಬರುವುದು ರಾಜ್ಯದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು.” ಎಂದು ಚಂದ್ರಶೇಖರ್ ಹೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
