fbpx
ಸಮಾಚಾರ

“ವಿಡಿಯೊದಲ್ಲಿ ಇರುವುದು ನಾನಲ್ಲ” ವೈರಲ್ ಆದ ಅಶ್ಲೀಲಾ ವಿಡಿಯೋ ಬಗ್ಗೆ ಸದಾನಂದ ಗೌಡ ಸ್ಪಷ್ಟನೆ

ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದ ಗೌಡ ಅವರದ್ದು ಎನ್ನಲಾದ ಅಶ್ಲೀಲ ಸಂಭಾಷಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ರಾಜಕೀಯ ಜೀವನದ ಏಳಿಗೆಯನ್ನು ಸಹಿಸಲಾಗದವರು ನಕಲಿ ವಿಡಿಯೋ ಸೃಷ್ಟಿಸಿ ತಮ್ಮ ತೇಜೋವಧೆಗೆ ಪ್ರಯತ್ನಿಸಿದ್ದಾರೆ. ಇದು ತಮಗೆ ತೀವ್ರ ನೋವುಂಟುಮಾಡಿದೆ ಎಂದು ಅವರು ಹೇಳಿದ್ದಾರೆ.

 

 

ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿರುವ ಸದಾನಂದ ಗೌಡ, ತಿರುಚಿದ , ನಕಲಿ ವಿಡಿಯೋ ಒಂದು ಹರಿದಾಡುತ್ತಿರುವುದು ತಿಳಿದು ಬಂದಿದೆ. ಆ ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ. ನನ್ನ ತೇಜೋವಧೆ ಮಾಡಲು ಇಂಥ ವಿಡಿಯೋ ಸೃಷ್ಟಿಸಿದ್ದಾರೆ ಎಂದು ಹೇಳಿದ್ದಾರೆ. ಸೈಬರ್ ಅಪರಾಧ ದಳಕ್ಕೆ ದೂರು ನೀಡಿದ್ದೇನೆ. ಈ ಕೆಲಸ ಮಾಡಿದ ಕಿರಾತಕರ ಬಂಧಿಸಲಾಗುತ್ತದೆ ಎನ್ನುವ ನಂಬಿಕೆ ಇದೆ ಎಂಧು ತಿಳಿಸಿದ್ದಾರೆ.

‘ಈ ವಿಷಯದಲ್ಲಿ ನಾನು ಈಗಾಗಲೇ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿರುವೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಷಯವನ್ನು ಫಾರ್ವರ್ಡ್‌ ಮಾಡುವವರು ಮತ್ತು ಅಪ್‌ಲೋಡ್‌ ಮಾಡುವವರು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಆ ರೀತಿ ಮಾಡುವ ಯಾರಾದರೂ ನಿಮಗೆ ತಿಳಿದಿದ್ದರೆ ನನಗೆ ಮಾಹಿತಿ ನೀಡಿ’ ಎಂದು ಮನವಿ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top