fbpx
ಸಮಾಚಾರ

ನಟ ಸೋನು ಸೂದ್​ ಮೇಲೆ ತೆರಿಗೆ ವಂಚನೆ ಆರೋಪ; ಐಟಿ ದಾಳಿ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಸೋನು ಸೂದ್‌ ಹೇಳಿದ್ದೇನು?

ಮೊದಲ ಬಾರಿಗೆ ಲಾಕ್​ಡೌನ್​ ಜಾರಿ ಆದಾಗಿನಿಂದ ಇಂದಿನವರೆಗೂ ನಟ ಸೋನು ಸೂದ್​ ಅವರು ಒಂದಿಲ್ಲೊಂದು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಲೇ ಬಂದಿದ್ದಾರೆ. ಆದರೆ ಅವರ ಮೇಲೆ ಕೆಲವು ಆರೋಪಗಳು ಕೂಡ ಇವೆ. ಸೋನು ಸೂದ್​ ಮಾಡುತ್ತಿರುವ ಸಮಾಜಸೇವೆಯನ್ನು ಅನೇಕರು ಅನುಮಾನದ ದೃಷ್ಟಿಯಿಂದ ನೋಡಿದ ಉದಾಹರಣೆ ಕೂಡ ಇದೆ. ಈಗ ಸರ್ಕಾರಕ್ಕೆ 20 ಕೋಟಿ ರೂ. ತೆರಿಗೆ ವಂಚಿಸಿದ ಆರೋಪ ಸೋನು ಸೂದ್​ ಅವರ ಮೇಲೆ ಎದುರಾಗಿದೆ. ಈ ಸಂಬಂಧ ಐಟಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅದಕ್ಕೆ ಸೋನು ಸೂದ್​ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತಂತೆ ಸೋನು ಸೂದ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ನಿಮ್ಮ ಕಥೆಯನ್ನು ನೀವು ಯಾವಾಗಲೂ ಹೇಳಬೇಕಾಗಿಲ್ಲ. ಅದಕ್ಕೆ ಸಮಯ ಬರುತ್ತದೆ. ನಾನು ನನ್ನ ಸಂಪೂರ್ಣ ಶಕ್ತಿ ಹಾಗೂ ಹೃದಯದಿಂದ ಭಾರತದ ಜನರ ಸೇವೆ ಮಾಡುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದೇನೆ. ನನ್ನ ಫೌಂಡೇಶನ್‍ನಲ್ಲಿರು ಪ್ರತಿ ಒಂದು ರೂಪಾಯಿಯನ್ನು ಅಮೂಲ್ಯವಾದಂತಹ ಜೀವವನ್ನು ಉಳಿಸಲು ಮತ್ತು ಅಗತ್ಯವಿರುವವರಿಗೆ ತಲುಪಿಸಲು ಕಾಯುತ್ತಿದ್ದೇನೆ.

ನಟ ಸೋನು ಸೂದ್‌ಗೆ ಸೇರಿದ ಆರು ಸ್ಥಳಗಳಲ್ಲಿ ಹಾಗೂ ನಟನ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಇಲಾಖೆಯು ಇದು ಸಮೀಕ್ಷೆ ಎಂದು ಹೇಳಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಸೋನುಸೂದ್ ನಡೆಸಿದ ಮಾತುಕತೆ ಹಾಗೂ ಕಾರ್ಯಕ್ರಮವೊಂದಕ್ಕೆ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಈ ದಾಳಿಯು ನಡೆದಿರುವ ಹಿನ್ನೆಲೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ಆಪ್‌ ಹಾಗೂ ಶಿವಸೇನೆ ತೀವ್ರ ವಾಗ್ದಾಳಿ ನಡೆಸಿತ್ತು.

ಸತತ ಮೂರು ದಿನಗಳ ಕಾಲ ನಟ ಸೋನು ಸೂದ್‌ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆಯು “ನಟ ಸೋನು ಸೂದ್‌ ಸುಮಾರು 20 ಕೋಟಿಗಿಂತ ಅಧಿಕ ತೆರಿಗೆ ವಂಚನೆ ಮಾಡಿದ್ದಾರೆ,” ಎಂದು ಆದಾಯ ತೆರಿಗೆ ಇಲಾಖೆಯು ಶನಿವಾರ ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

“ಸೋನು ಸೂದ್‌ರ ಲಾಭರಹಿತ ಸಂಸ್ಥೆಯು ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ವಿದೇಶಿ ಕೊಡುಗೆದಾರರಿಂದ 2.1 ಕೋಟಿ ಹಣವನ್ನು ಸಂಗ್ರಹಿಸಿದೆ. ಇದು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಆಗಿದೆ,” ಎಂದು ಆರೋಪ ಮಾಡಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top