ಕರ್ನಾಟಕ ಹೈಕೋರ್ಟಿನಲ್ಲಿ 2021ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಎರಡನೇ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 24, 2021 ಕೊನೆ ದಿನಾಂಕವಾಗಿದೆ.
ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ: ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ವಯೋಮಿತಿ: ಸೆಪ್ಟೆಂಬರ್ 24,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ನೇಮಕಾತಿ ಪ್ರಕ್ರಿಯೆ:
ಅಭ್ಯರ್ಥಿಗಳ ಆಯ್ಕೆಯನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನ ಪರಿಶೀಲಿಸಿ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ವೈವಾ ವೋಸ್ ನಂತರ ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 24,2021ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
