fbpx
ಸಮಾಚಾರ

ಶಾಲೆಯಲ್ಲಿ ಕನ್ನಡ ಕಡ್ಡಾಯ ಪ್ರಶ್ನಿಸಿ ರಾಜ್ಯ ಹೈಕೋರ್ಟ್‌ ಮೊರೆ ಹೋದ 4ನೇ ತರಗತಿ ವಿದ್ಯಾರ್ಥಿ

ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು ಎಂದು ಕರ್ನಾಟಕ ಸರ್ಕಾರ ಘೋಷಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ.

ಬೆಂಗಳೂರಿನ ಬಿಷಪ್ ಕಾಟನ್ ಬಾಯ್ಸ್ ಸ್ಕೂಲ್ ವಿದ್ಯಾರ್ಥಿ ಕೀರ್ತನ್ ಸುರೇಶ್ ಎಂಬ ಅರ್ಜಿದಾರನ ಪರವಾಗಿ ತಾಯಿ ಸುಜಾತಾ ಎನ್ ಕೋರ್ಟ್‌ನಲ್ಲಿ ಪ್ರತಿನಿಧಿಸಿದ್ದು, ಕೆಎಲ್‌ಎಲ್ ಕಾಯ್ದೆ 2015 “ಕಠಿಣವಾದ, ತಾರತಮ್ಯ ಪೂರಿತ ಮತ್ತು ಭಾರತದ ಸಂವಿಧಾನದ ಉಲ್ಲಂಘನೆಯಾಗುತ್ತದೆ” ಎಂದು ಹೇಳಿದ್ದಾರೆ.

ಈ ಅರ್ಜಿಯ ಸಂಬಂಧ ವಾದ ವಿವಾದ ಆಲಿಸಿದ ನ್ಯಾಯಮೂರ್ತಿ ಆರ್. ದೇವದಾಸ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಸಲ್ಲಿಸಲು ಆದೇಶಿಸಿದರು. ಸರ್ಕಾರಿ ನಿರ್ದೇಶನಗಳ ಪ್ರಕಾರ ಈಗ ಕನ್ನಡವನ್ನು ಎರಡನೇ ಭಾಷೆಯಾಗಿ ಪರಿಚಯಿಸಬೇಕು ಎಂದು ಶಾಲಾ ಅಧಿಕಾರಿಗಳು ಪೋಷಕರಿಗೆ ತಿಳಿಸಿದ್ದರಿಂದ ಇದನ್ನು ವಿರೋಧಿಸಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top