fbpx
ಸಮಾಚಾರ

SSC ಭರ್ಜರಿ ನೇಮಕಾತಿ: 3261 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಸೆಲೆಕ್ಷನ್‌ ಪೋಸ್ಟ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳನ್ನು ಕೇಂದ್ರ ಸರ್ಕಾರದ ಅಧೀನದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಪಿಯುಸಿ, ಪದವಿ, ಸ್ನಾತಕ ಪದವಿ ಕೋರ್ಸ್‌ಗಳನ್ನು ಪಾಸ್‌ ಮಾಡಿದ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶಗಳಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಗಳ ಹೆಸರು:
ಜೂನಿಯರ್ ಸೀಡ್ ಅನಾಲಿಸ್ಟ್, ಸೈಂಟಿಫಿಕ್ ಅಸಿಸ್ಟಂಟ್, ಅಕೌಂಟಂಟ್, ಹೆಡ್ ಕ್ಲರ್ಕ್, ಸ್ಟಾಫ್ ಕಾರ್ ಡ್ರೈವರ್, ಟೆಕ್ನಿಕಲ್ ಸೂಪರಿಂಟೆಂಡಂಟ್, ಟೆಕ್ನಿಕಲ್ ಅಸಿಸ್ಟಂಟ್, ಜೂನಿಯರ್ ಕಂಪ್ಯೂಟರ್ ಆಪರೇಟರ್, ಮಲ್ಟಿಟಾಸ್ಕಿಂಗ್ ಸ್ಟಾಫ್, ಸೀನಿಯರ್ ಸೈಂಟಿಫಿಕ್ ಅಸಿಸ್ಟಂಟ್, ಲ್ಯಾಬೋರೇಟರಿ ಅಸಿಸ್ಟೆಂಟ್, ಆಫೀಸ್ ಅಟೆಂಡೆಂಟ್ ಹಾಗೂ ವಿವಿಧ ಹುದ್ದೆಗಳು.

ವಿದ್ಯಾರ್ಹತೆ:
ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ
ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ
ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ 5 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ -100 ರೂ
ಎಸ್​ಸಿ, ಎಸ್​​ಟಿ, ಪಿಡ್ಬ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ
ಕಂಪ್ಯೂಟರ್​ ಆಧಾರಿತ ಪರೀಕ್ಷೆ ನಡೆಯಲಿದೆ
ತಪ್ಪು ಉತ್ತರಕ್ಕೆ 0.50 ಅಂಕ ಕಡಿತ ಮಾಡಲಾಗುವುದು
ಟೈಪಿಂಗ್​, ಡಾಟಾ ಎಂಟ್ರಿ, ಕಂಪ್ಯೂಟರ್​ ಜ್ಞಾನ ಆಧಾರಿತ ಕೌಶಲ್ಯ ಪರೀಕ್ಷೆ ನಡೆಸಲಾಗುವುದು

ಎಸ್​ಎಸ್​ಸಿ ಹುದ್ದೆಗೆ ಹೊರಡಿಸಿರುವ ನೋಟಿಫಿಕೇಷನ್​ಗೆ ಇಲ್ಲಿ ಕ್ಲಿಕ್​ ಮಾಡಿ
ಆನ್​ಲೈನ್​ನಲ್ಲಿ ಅರ್ಜಿ ಭರ್ತಿ ಮಾಡಲು ಇಲ್ಲಿ ಕ್ಲಿಕ್​ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top