fbpx
ಸಮಾಚಾರ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ: ಪಾಲಿಕೆಯ 190 ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಪೌರ ಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ದಕ್ಷಿಣ ಕನ್ನಡ ಅಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು : ಪೌರ ಕಾರ್ಮಿಕರು
ಹುದ್ದೆಗಳ ಸಂಖ್ಯೆ: 190

ಅರ್ಹತೆಗಳು : ಯಾವುದೇ ಕನಿಷ್ಠ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ ಅರ್ಹತೆಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ : ರೂ.17000-28950

ಅರ್ಜಿ ಶುಲ್ಕ (application Fee)
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲರಿಗೆ ಅರ್ಜಿ ಶುಲ್ಕ 100 ರೂ ಆಗಿದೆ.
ಸಾಮಾನ್ಯ ಇತರೆ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 200 ರೂ ಆಗಿದೆ.
ಅರ್ಜಿ ಶುಲ್ಕ ಪಾವತಿಸಲು ಕಡೆಯ ದಿನಾಂಕ ನವೆಂಬರ್​ 23 ಆಗಿದೆ

ಆಯ್ಕೆ ಪ್ರಕ್ರಿಯೆ :
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕ ಹುದ್ದೆಗಳ ನೇಮಕಾತಿಯನ್ನು ಮಂಗಳೂರು ಮಹಾನಗರ ಪಾಲಿಕೆಗೆ ಮಾತ್ರ ಸೀಮಿತಗೊಳಿಸಲಾಗುವುದು. ಹಾಗೂ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಹೊರಗುತ್ತಿಗೆ/ಇತರೆ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡಲಾಗುವುದು.

ನೇಮಕಾತಿಗೆ ಹೊರಡಿಸಿರುವ ಅಧಿಕೃತ ಅಧಿಸೂಚನೆ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ
ಪೌರ ಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್​ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top