fbpx
ಸಮಾಚಾರ

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ

ಮಾಜಿ ಟೀಮ್ ಇಂಡಿಯಾ ಆಟಗಾರ ಯುವರಾಜ್ ಸಿಂಗ್ ಅವರನ್ನು ಹೈಕೋರ್ಟ್‌ ಆದೇಶದ ಮೇರೆಗೆ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಘಟನೆ ಹಿನ್ನೆಲೆ:
2020ರ ಜೂನ್​ನಲ್ಲಿ ರೋಹಿತ್‌ ಶರ್ಮಾ ಜೊತೆಗೆ ಲೈವ್‌ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್‌, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದ್ದರು. ಚಹಲ್ ಮಾಡೋ ಟಿಕ್-ಟಾಕ್ ವೀಡಿಯೊ ಬಗ್ಗೆ ಪ್ರಸ್ತಾಪಿಸಿದ್ದ ಯುವಿ , ಈ ಯುಜಿ ಹಾಗೂ ಕುಲ್ದೀಪ್​ಗೆ ಬೇರೆ ಕೆಲಸ ಇಲ್ಲ ಎಂದಿದ್ದರು. ಇದೇ ವೇಳೆ ಜಾತಿಯನ್ನು ಪ್ರಸ್ತಾಪಿಸಿ ಹೀಯಾಳಿಸಿದ್ದರು.

ಈ ವಿಚಾರ ವೈರಲ್ ಆಗುತ್ತಿದ್ದಂತೆ ಯುವರಾಜ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದರು. ಆದರೆ ಈ ಬಗ್ಗೆ ದಲಿತ ಮಾನವ ಹಕ್ಕುಗಳ ವಕೀಲ ಕನ್ವೀನರ್ ರಜತ್ ಕಲ್ಸನ್ ಅವರು ದೂರು ನೀಡಿದ್ದರು. ಅದರಂತೆ ಹರ್ಯಾಣದ ಹಿಸಾರ್‌ನ ಹಂಸಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವರಾಜ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್‌ 153, 153 ಎ, 295, 505 ಮತ್ತು ಎಸ್‌ಸಿ / ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

“ನಾವು ಔಪಚಾರಿಕ ಬಂಧನವನ್ನು ಮಾತ್ರ ಮಾಡಿದ್ದೇವೆ ಮತ್ತು ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಆದೇಶದ ಅನುಸಾರವಾಗಿ ಯುವರಾಜ್ ಸಿಂಗ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಪೋಲಿಸ್ ಸೂಪರಿಂಟೆಂಡೆಂಟ್ ನಿತಿಕಾ ಗಹ್ಲೌತ್ ಅವರು ಫೋನ್ ಮೂಲಕ ತಿಳಿಸಿದ್ದಾರೆ. “ಯುವರಾಜ್ ಸಿಂಗ್ ಅವರು ಶನಿವಾರ ಹಂಸಿಗೆ ಆಗಮಿಸದರು ಮತ್ತು ನಾವು ಔಪಚಾರಿಕ ಅವರ ಬಂಧಿಸಿ ಕೆಲವು ಗಂಟೆಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಹಂಸಿ ಡಿಎಸ್ಪಿ ವಿನೋದ್ ಶಂಕರ್ ಅವರು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top