fbpx
ಸಮಾಚಾರ

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಸೂಪರ್ ಸ್ಟಾರ್ ರಜನಿಕಾಂತ್ ಹಠಾತ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಟ ರಜನಿಕಾಂತ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಅಲ್ವಾರ್‌ಪೇಟ್‌ನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಜನಿಕಾಂತ್ ಅವರು ಫುಲ್ ಬಾಡಿ ಚೆಕಪ್ ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಒಂದು ದಿನ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ. ಸದ್ಯ ಅವರು ಆರೋಗ್ಯವಾಗಿದ್ದು, ಅಭಿಮಾನಿಗಳು ಆತಂಕ ಪಡಬೇಡಿ ಎಂದು ಲತಾ ರಜನಿಕಾಂತ್ ಮನವಿ ಮಾಡಿದ್ದಾರೆ. ಇದು ಸಾಮಾನ್ಯವಾಗಿ ನಿಯಮಿತ ಮಧ್ಯಂತರದಲ್ಲಿ ಮಾಡಲಾಗುವ ವೈದ್ಯಕೀಯ ಪರೀಕ್ಷೆಯಾಗಿದೆ. ಆದ್ದರಿಂದ ಅವರನ್ನು ಈಗ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ದಾಖಲಿಸಲಾಗಿದೆ ಎಂದು ನಟನ ಆಪ್ತರು ತಿಳಿಸಿದ್ದಾರೆ.

2020ರ ಡಿಸೆಂಬರ್‌ನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಜನಿಕಾಂತ್‌ ಅವರಿಗೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾದ ಕಾರಣ ಹೈದರಾಬಾದ್‌ನಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಎರಡು ದಿನಗಳ ಚಿಕಿತ್ಸೆ ನಂತರ ಗುಣಮುಖರಾಗಿದ್ದರು. ಹಿಂದೆ ಅವರಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆದಿದೆ.

ಅಂದಹಾಗೆ ಸೋಮವಾರ ದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್‌ ಅವರಿಗೆ 51ನೇ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ರಜನಿಕಾಂತ್‌ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರನ್ನು ಭೇಟಿಯಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top