ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಇದೀಗ ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ. ರಾಜ್ಕುಮಾರ್ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಸರ್ಕಾರದ ಸಕಲ ಗೌರವಗಳೊಂದಿಗೆ ಪುನೀತ್ ರಾಜ್ಕುಮಾರ್ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಇನ್ನು ಇಂದು ಸಂಜೆ 5 ಗಂಟೆ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸದ್ಯಕ್ಕೆ ನಿರ್ಧರಿಸಿದ್ದಾರೆ.
ವಿದೇಶದಲ್ಲಿರುವ ಮಗಳು ಇಂದು ಸಂಜೆ 4-30ರ ಸುಮಾರಿಗೆ ಬೆಂಗಳೂರಿಗೆ ತಲುಪಲಿದ್ದಾರೆ. ಮಗಳು ಬಂದ ಕೂಡಲೇ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಆರಂಭವಾಗಲಿದೆ. ಈಗಾಗಲೇ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಆರಂಭಿಸಲಾಗಿದೆ.
ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆಗೊಳಿಸಲಾಗಿದ್ದು, ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಹೀಗಾಗಿ ಕುಟುಂಬಸ್ಥರು 3 ಗಂಟೆಯ ಬಳಿಕ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬರದಂತೆ ಮನವಿ ಮಾಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
