ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 150 ಬೆರಳಚ್ಚುಗಾರರ ಹುದ್ದೆ ಭರ್ತಿ ಮಾಡಲು ನೋಡಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕೆಳಗಿನ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ ಅರ್ಹತೆಗಳು
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಅರ್ಹತೆ ವರ್ಗಾವಾರು ಈ ಕೆಳಗಿನಂತಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
ಎಸ್ಸಿ / ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ರೂ.350 ಪಾವತಿಸಬೇಕು. ಇತರೆ ಅಭ್ಯರ್ಥಿಗಳು ರೂ.200 ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಇ-ಚಲನ್ ಪಡೆದು ಪಾವತಿಸಬಹುದು.
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-10-2021
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27-11-2021 ರ ರಾತ್ರಿ 11-59 ರವರೆಗೆ.
ಸಂಬಳ ನಿರೀಕ್ಷೆ: ಕರ್ನಾಟಕ ಉಚ್ಚ ನ್ಯಾಯಾಲಯದ (ಅಧಿಕಾರಿ ಮತ್ತು ನೌಕರರ) ಪರಿಷ್ಕೃತ ವೇತನ ಶ್ರೇಣಿ ನಿಯಮ 2018 ಅನುಸಾರ ಅಂಗೀಕೃತ ಭತ್ಯೆಗಳೊಂದಿಗೆ 25,500-81,100/ ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಕೆ :
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 27,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.
ನೇಮಕಾತಿಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
