fbpx
ಸಮಾಚಾರ

ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರು ಯಾರ್ಯಾರು ಗೊತ್ತಾ? ಇಲ್ಲಿದೆ ಲಿಸ್ಟ್

ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪುನೀತ್ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ “ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಅವರು ತಿಳಿಸಿದ್ದಾರೆ. “ಪುನೀತ್ ರಾಜ್ ಕುಮಾರ್ ಅವರು ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆ ಮತ್ತು ಅವರ ಸಾಮಾಜಿಕ ಕಾರ್ಯಗಳನ್ನು ಪರಿಗಣಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಮ್ಮ ಸರ್ಕಾರ ನಿರ್ಧರಿಸಿದೆ.” ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಅಂದಹಾಗೆ ಇದುವರೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು 9 ಜನರಿಗೆ ನೀಡಲಾಗಿದೆ. 1992 ರಲ್ಲಿ ಕುವೆಂಪು, ಡಾ. ರಾಜ್ ಕುಮಾರ್, 1999 ರಲ್ಲಿ ಎಸ್. ನಿಜಲಿಂಗಪ್ಪ, 2000 ದಲ್ಲಿ ಸಿ.ಎನ್.ಆರ್. ರಾವ್, 2001 ರಲ್ಲಿ ಡಾ. ದೇವಿಪ್ರಸಾದ್ ಶೆಟ್ಟಿ, 2005 ರಲ್ಲಿ ಭೀಮಸೇನ ಜೋಷಿ, 2007 ರಲ್ಲಿ ಶಿವಕುಮಾರ ಸ್ವಾಮಿಗಳು, 2008 ರಲ್ಲಿ ದೇ. ಜವರೇಗೌಡ, 2009 ರಲ್ಲಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top