fbpx
ಸಮಾಚಾರ

ಚೊಚ್ಚಲ ಮಗುವಿಗೆ ತಂದೆಯಾದ ಟೀಮ್ ಇಂಡಿಯಾ ಆಟಗಾರ ಭುವನೇಶ್ವರ್ ಕುಮಾರ್

ಭಾರತದ ಕ್ರಿಕೆಟಿಗ ಭುವನೇಶ್ವರ್ ಕುಮಾರ್ ಅವರು ಮೊದಲ ಬಾರಿಗೆ ತಂದೆಯಾಗಿದ್ದಾರೆ. ಭುವಿ ಪತ್ನಿ ನೂಪುರ್ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ತಾಯಿ ಮಗು ಇಬ್ಬರೂ ಆರೋಗ್ಯದಿಂದಾರೆ. ಮಂಗಳವಾರ ಆಕೆಯನ್ನು ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಿಸಲಾಗಿತ್ತು ಎಂಬ ಮಾಹಿತಿ ದೊರೆತಿದೆ.

ಮೀರತ್ ಜಿಲ್ಲಾ ಕ್ರಿಕೆಟ್ ಸಂಸ್ಥೆಯ (MDCA) ಖಜಾಂಚಿ ರಾಕೇಶ್ ಗೋಯಲ್ ಮಾಧ್ಯಮಗಳಿಗೆ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಭುವನೇಶ್ವರ್ ಅವರ ಪತ್ನಿ ದಂಪತಿಯ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧದ T20I ಸರಣಿಯಲ್ಲಿ ಭಾರತ ತಂಡದೊಂದಿಗೆ ಇದ್ದ ಕಾರಣ, ಭುವನೇಶ್ವರ್ ಆಸ್ಪತ್ರೆಯಲ್ಲಿ ಇರಲಿಲ್ಲ ಎಂದು ವರದಿಯಾಗಿದೆ. ಅವರು ಗುರುವಾರ ಮೀರತ್ ನಿವಾಸವನ್ನು ತಲುಪುವ ನಿರೀಕ್ಷೆಯಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top