fbpx
ಸಮಾಚಾರ

ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್‌-2022 ವೇಳಾ ಪಟ್ಟಿ ಫಿಕ್ಸ್‌, ಚೆನ್ನೈನಲ್ಲಿ ಮೊದಲ ಪಂದ್ಯ

ಐಪಿಎಲ್ ಎಂದರೆ ಸಾಕು ಪ್ರಪಂಚದಾದ್ಯಂತ ಇರುವ ಕ್ರಿಕೆಟ್ ಪ್ರೇಮಿಗಳು ಕಿವಿ ನೆಟ್ಟಗಾಗುತ್ತವೆ. ಕಳೆದ ಹದಿನಾಲ್ಕು ವರ್ಷಗಳಿಂದ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ನೀಡುತ್ತಿರುವ ಐಪಿಎಲ್ ಪ್ರಪಂಚದಲ್ಲಿಯೇ ಅತ್ಯಂತ ಜನಪ್ರಿಯ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಗಳಿಸಿದ್ದು ಬಿಸಿಸಿಐನ ಪ್ರಮುಖ ಆದಾಯ ಮೂಲಗಳಲ್ಲಿ ಒಂದು. ಐಪಿಎಲ್ ೧೪ನೆ ಆವೃತ್ತಿ ಮೊನ್ನೆಯಷ್ಟೇ ಮುಕ್ತಾಯಗೊಂಡಿದ್ದರೂ ಮುಂದಿನ ಆವೃತ್ತಿಯ ಬಗೆಗಿನ ಸುದ್ದಿಗಳು ಈಗಾಗಲೇ ಹರಿದಾಡತೊಡಗಿವೆ.

ಐಪಿಎಲ್ 2022ರ ವೇಳಾಪಟ್ಟಿಯನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸಲಿದ್ದು, ಕ್ರಿಕೆಟ್‌ ಬಜ್ ವರದಿ ಪ್ರಕಾರ, ಐಪಿಎಲ್ 15 ನೇ ಸೀಸನ್‌ನ ವೇಳಾಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆಯಂತೆ. ಪ್ರತಿ ಸೀಸನ್‌ ನಲ್ಲಿ ಈವರೆಗೆ 60 ಪಂದ್ಯಗಳು ನಡೆಯುತ್ತಿದ್ದವು. ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ ಪಂದ್ಯಗಳ ಸಂಖ್ಯೆ 74 ಕ್ಕೆ ಹೆಚ್ಚಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಸೀಸನ್ 60 ದಿನಗಳ ಕಾಲ ನಡೆಯಲಿದೆ ಎಂದು ವರದಿ ಹೇಳಿದೆ.

ಟೂರ್ನಮೆಂಟ್ ಭಾರತದಲ್ಲಿ ಏಪ್ರಿಲ್ 2, 2022 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಜೂನ್ 4 ಅಥವಾ 5 ರಂದು ಐಪಿಎಲ್ ಫೈನಲ್ ಪಂದ್ಯ ನಡೆಯುವ ಸಾಧ್ಯತೆ ಇದೆ.ಈ ಟೂರ್ನಿಯಲ್ಲಿ 10 ತಂಡಗಳು ಭಾಗವಹಿಸಲಿದ್ದು ಒಟ್ಟು 74 ಪಂದ್ಯಗಳು ನಡೆಯಲಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಬಿಸಿಸಿಐನಿಂದ ಅಧಿಕೃತ ಪ್ರಕಟಣೆಗಾಗಿ ನಾವು ಕಾಯಬೇಕಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top