fbpx
ಸಮಾಚಾರ

‘ನಾನು ಆರೋಗ್ಯವಾಗಿದ್ದೀನಿ” ವದಂತಿಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ಸ್ಪಷ್ಟನೆ

“ಕನ್ನಡ ಚಿತ್ರರಂಗದ ಹಿರಿಯ ಮತ್ತು ಲೆಜೆಂಡರಿ ಮ್ಯೂಸಿಕ್ ಕಂಪೋಸರ್ ಮತ್ತು ಗೀತರಚನೆಕಾರ ಹಂಸಲೇಖ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ” ಎಂದು ಕೇಳಸಿಲ್ಲದ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈಗ ತಮ್ಮ ಆರೋಗ್ಯದ ವಿಚಾರವಾಗಿ ಸ್ವತಃ ಹಂಸಲೇಖ ಅವರೇ ಸ್ಪಷ್ಟನೆ ನೀಡಿದ್ದು ತಾವು ಆರೋಗ್ಯದಿಂದ ಇರುವುದಾಗಿ ಖಚಿತಪಡಿಸಿದ್ದಾರೆ.

 

 

ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುವ ಮೂಲಕ ಹಂಸಲೇಖ ಈ ವಿಚಾರ ತಿಳಿಸಿದ್ದಾರೆ. ‘ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೆ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ, ಸಹಿಸಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ. ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ’ ಎಂದಿದ್ದಾರೆ ಹಂಸಲೇಖ.

‘ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ. ಅಭಿಮಾನ ಆವೇಶವಾಗಬಾರದು. ಆವೇಶ ಅವಘಡಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತೆ ಇರಬೇಕು, ಹಾಡು ಕೇಳಿಸುತ್ತದೆ. ಮುಟ್ಟಿಸುತ್ತದೆ. ನಿಮ್ಮ ಪ್ರೀತಿ ನನಗೆ ತಲುಪಿದೆ. ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು. ನಿಮ್ಮ ಹಂಸಲೇಖ’ ಎಂದು ಅವರು ಬರೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top