fbpx
ಸಮಾಚಾರ

“ಯಶ್​ ನಡೆದುಕೊಂಡ ರೀತಿ ನನಗೆ ಇಷ್ಟವಾಯಿತು, ನಾನು ಅವರ​ ಬಳಿ ಕ್ಷಮೆ ಕೇಳಿದೆ” ಆಮಿರ್ ಖಾನ್ ಹೀಗೆ ಹೇಳಿದ್ಯಾಕೆ ಗೊತ್ತಾ?

ರಾಕಿಂಗ್​ ಸ್ಟಾರ್​ ಯಶ್​ ನಟನೆಯ ಬಹುನಿರೀಕ್ಷಿತ ‘ಕೆಜಿಎಫ್​ 2’ ಹಾಗೂ ಆಮಿರ್​ ಖಾನ್​ ಅಭಿನಯದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈ ಎರಡು ಸಿನಿಮಾಗಳು ಒಂದೇ ದಿನ ತೆರೆಗೆ ಬರುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್​ ಏರ್ಪಡುತ್ತಿದೆ. ಈ ಮಧ್ಯೆ ಬಾಲಿವುಡ್ ನಟ ಆಮಿರ್ ಖಾನ್ ಅವರು ಯಶ್ ಅವರ ಬಳಿ ಕ್ಷಮೆ ಕೂಡ ಕೇಳಿದ್ದಾರೆ.

” ನಾನು ಬೇರೆಯವರನ್ನು ಅತಿಕ್ರಮಿಸಿಕೊಳ್ಳುತ್ತಿದ್ದೇನೆ ಎಂಬ ಭಾವನೆ ಸೃಷ್ಟಿ ಆಗುವುದನ್ನು ದ್ವೇಷಿಸ್ತೇನೆ. ಆದರೆ ನಾನು ಮೊದಲ ಬಾರಿಗೆ ಸಿಖ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಾರಣ ಏಪ್ರಿಲ್ 14ರಂದು ಬೈಸಾಖಿ ದಿನ ಸಿನಿಮಾ ರಿಲೀಸ್ ಮಾಡುವುದು ಸೂಕ್ತ ಎಂದು ಭಾವಿಸಿದ್ದೆ. ಹೀಗಾಗಿ ನಾನು ಕೆಜಿಎಫ್ ನಿರ್ಮಾಪಕ ವಿಜಯ್‌ ಕಿರಗಂದೂರು, ನಿರ್ದೇಶಕ ಪ್ರಶಾಂತ್‌ ನೀಲ್ ಮತ್ತು ಯಶ್ ಅವರಲ್ಲಿ ಕ್ಷಮೆ ಕೇಳಿದ್ದೇನೆ” ಎಂದು ಆಮಿರ್ ಖಾನ್ ಹೇಳಿದ್ದಾರೆ.

ಬೈಸಾಖಿ ದಿನ ನನ್ನ ಸಿನಿಮಾ ಬಿಡುಗಡೆಯಾದರೆ ಸೂಕ್ತ ಎಂದು ಅವರಿಗೆ ತಿಳಿಸಿದೆ. ಅವರು ನನ್ನ ಅಭಿಪ್ರಾಯವನ್ನು ಒಪ್ಪಿಕೊಂಡರು. ಅವರ ಸಿನಿಮಾ ರಿಲೀಸ್ ಇದ್ದರೂ ಅದೇ ನೀವು ಸಿನಿಮಾ ಬಿಡುಗಡೆ ಮಾಡಿ ಎಂದು ನನಗೆ ಹೇಳಿದರು. ಅವರ ಸ್ಪಂದನೆ ನನಗೆ ಇಷ್ಟ ಆಯಿತು. ನನ್ನ ಯೋಚನೆಗೆ ಯಶ್ ತುಂಬಾನೇ ಬೆಂಬಲವಾಗಿ ನಿಂತರು ಎಂದು ಅಮೀರ್ ಹೇಳಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top