fbpx
ಸಮಾಚಾರ

ವಿಚಾರಣೆ ಮುಗಿಸಿದ ಹಂಸಲೇಖ: ಕನ್ನಡ ಪರ, ದಲಿತ ಸಂಘಟನೆ V/S ಹಿಂದೂ ಸಂಘಟನೆ; ಠಾಣೆ ಮುಂದೆ ಹೈಡ್ರಾಮ

ಅಸ್ಪೃಶ್ಯತೆ ಮತ್ತು ಅಸಮಾನತೆ ಬಗ್ಗೆ ನಾದ ಬ್ರಹ್ಮ, ಸಂಗೀತ ಮಾಂತ್ರಿಕ ಹಂಸಲೇಖ ಅವರು ಆಡಿರುವ ಮಾತು ಈಗ ವಿವಾದದ ಕಿಡಿ ಹೊತ್ತಿಸಿದೆ. “ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ..? ಕುರಿ ರಕ್ತ ಪ್ರೈ ಮಾಡಿ ಕೊಟ್ರೆ ತಿಂತಾರಾ..? ಲಿವರ್ ಕೊಟ್ರೆ ತಿಂತಾರಾ..? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ” ಎಂದು ಹೇಳಿದ್ದರು.

ನಾದಬ್ರಹ್ಮ ಹಂಸಲೇಖ ಅವರ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅವರಿಗೆ ನೋಟೀಸ್ ನೀಡಲಾಗಿತ್ತು. ಇಂದು ಅವರು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿ, ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ. ಇದೀಗ ಒಂದು ಗಂಟೆಯ ವಿಚಾರಣೆ ಮುಗಿಸಿ ವಾಪಸ್​ ತೆರಳಿದ್ದಾರೆ.

ಈ ಸಂಧರ್ಭದಲ್ಲಿ ಹಂಸಲೇಖ ಅವರಿಗೆ ಬೆಂಬಲ ಸೂಚಿಸಲು ಕನ್ನಡ ಪರ ಸಂಘನೆ, ದಲಿತ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರೆ ಹಂಸಲೇಖ ಅವರ ವಿರುದ್ಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಘೋಷಣೆ ಕೂಗಿದರು. ಈ ವೇಳೆ ಎಚ್ಚೆತ್ತ ಪೊಲೀಸರು ಎರಡೂ ತಂಡವನ್ನು ಸಮಾಧಾನಪಡಿಸಿ ಹಿಂದಕ್ಕೆ ಕಳುಹಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top