fbpx
ಸಮಾಚಾರ

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ: ಆಸ್ಪತ್ರೆಯಲ್ಲಿ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಅಪಘಾತ ಗಾಯಗೊಂಡು ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

84 ವರ್ಷದ ಶಿವರಾಮ್ ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ಆಗ ಅವರನ್ನು ಕರೆತಂದು ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಲಾಗಿತ್ತು ಅವರ ತಲೆಗೆ ಗಂಭೀರ ಗಾಯವಾಗಿದ್ದು ಬ್ರೈನ್ ಗೆ ಬಲವಾದ ಪೆಟ್ಟು ಬಿದ್ದಿದ್ದು ಅರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೈದ್ಯರು ಎಷ್ಟೇ ಪ್ರಯತ್ನ ಪಟ್ಟಿದರೂ ಚಿಕಿತ್ಸೆಗೆ ಸ್ಪಂದಿಸಿದೆ ಶಿವರಾಂ ಕೊನೆಯುಸಿರೆಳೆದಿದ್ದಾರೆ.

ಆರು ದಶಕಗಳಿಂದ ಕನ್ನಡ ಸಿನಿಮಾ ರಂಗದ ನಂಟುಹೊಂದಿದ್ದಾರೆ. ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಪಳಗಿದ ಶಿವರಾಂ ನಾಯಕ ನಟರಾಗಿ, ಹಾಸ್ಯನಟ, ಪೋಷಕ ನಟ, ನಿರ್ಮಾಪಕರಾಗಿಯೂ ಹೆಸರು ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top