ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾಕಷ್ಟು ಕನಸುಗಳನ್ನು ಹೊತ್ತುಕೊಂಡಿದ್ದವರು. ಪುನೀತ್ ರಾಜ್ಕುಮಾರ್ ಪಿಆರ್ಕೆ ಪ್ರೊಡಕ್ಷನ್ ಅಡಿಯಲ್ಲಿ ಸಾಕಷ್ಟು ಭಿನ್ನ ಸಿನಿಮಾಗಳನ್ನು ನಿರ್ಮಾಣ ಮಾಡೋಕೆ ಪಣತೊಟ್ಟಿದ್ದರು. ಇದರ ಜತೆಗೆ ಕರ್ನಾಟಕದ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿದ್ದರು. ಆದರೆ ಅದನ್ನು ಅಭಿಮಾನಿಗಳಿಗೆ ತೋರಿಸುವ ಮುನ್ನವೇ ನಮ್ಮನ್ನ ಬಿಟ್ಟು ಅಪ್ಪು ದೂರವಾಗಿದ್ದಾರೆ.
ಪುನೀತ್ ರಾಜ್ಕುಮಾರ್ ಅವರು ಕರುನಾಡಿನ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿಸಿದ್ದರು. ಭೌತಿಕವಾಗಿ ಅವರ ಅನುಪಸ್ಥಿತಿಯಲ್ಲೇ ಇಂದು (ಡಿ.6) ‘ಗಂಧದ ಗುಡಿ’ ಡಾಕ್ಯುಮೆಂಟರಿಯ ಶೀರ್ಷಿಕೆ ಟೀಸರ್ ಅನಾವರಣ ಆಗಿದೆ.
ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್ ಮಾಡಲಾಗಿದೆ. ಇದಕ್ಕೆ ‘ಗಂಧದ ಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. PRK ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಟೀಸರ್ ರಿಲೀಸ್ ಆಗಿದೆ.
ಕರ್ನಾಟಕದ ದಟ್ಟ ಕಾನನದ ಒಳಗೆ ಇದನ್ನು ಚಿತ್ರೀಕರಿಸಲಾಗಿದೆ. ಪ್ರಕೃತಿ ಸೌಂದರ್ಯವನ್ನು, ವನ್ಯಜೀವಿಗಳ ಜೀವನನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ಕೇವಲ ಟೀಸರ್ ನೋಡಿಯೇ ಜನರು ರೋಮಾಂಚನಗೊಳ್ಳುತ್ತಿದ್ದಾರೆ.
‘ಗಂಧದ ಗುಡಿ’ ಸಾಕ್ಷ್ಯಚಿತ್ರವು ಥಿಯೇಟರ್ನಲ್ಲಿ ಬಿಡುಗಡೆ ಆಗಲಿದೆ. 2022ರಲ್ಲಿ ಚಿತ್ರಮಂದಿರಗಳಲ್ಲಿ ಇದನ್ನು ತೆರೆಕಾಣಿಸಲಿ ಪ್ಲ್ಯಾನ್ ಮಾಡಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
