fbpx
ರಾಜಕೀಯ

ಸೂರಜ್ ರೇವಣ್ಣ ವಿರುದ್ಧ ಹೈಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ.

ವೈವಾಹಿಕ ವಿವರಗಳನ್ನು ಮುಚ್ಚಿಟ್ಟು ಹಾಸನದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಡಾ. ಸೂರಜ್‌ ರೇವಣ್ಣಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಸೂರಜ್​ ಮದುವೆಯ ಮಾಹಿತಿ ಮುಚ್ಚಿಟ್ಟ ಬಗ್ಗೆ ಆರೋಪ ಹಾಗೂ ಸೂರಜ್​ ಹೆಸರಿನ ಆಸ್ತಿಯ ಬಗ್ಗೆಯೂ ಮಾಹಿತಿ ನೀಡಿಲ್ಲ, ಮದುವೆ ಕಾಲಂ ನನಗೆ ಅನ್ವಯ ಇಲ್ಲ ಅಂತಾ ನಮೂದು ಮಾಡಲಾಗಿತ್ತು.

ಅಲ್ಲದೇ ಸೂರಜ್ ರೇವಣ್ಣ ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಈ ಹಿನ್ನೆಲೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಸೂರಜ್‌ ರೇವಣ್ಣ ಸ್ಪರ್ಧೆ ಪ್ರಶ್ನಿಸಿದ್ದ ರಿಟ್‌ ಅರ್ಜಿ ವಜಾ ಮಾಡಿದೆ. ಅರ್ಜಿದಾರರ ಆರೋಪ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದ ಅರ್ಜಿಯಲ್ಲಿ ಪತ್ನಿಗೆ ಸಂಬಂಧಿಸಿದ ಮಾಹಿತಿಗಳನ್ನು ಒದಗಿಸಿಲ್ಲ ಕಾರಣ ಪತ್ನಿಗೆ ಸಂಬಂಧಿಸಿದ ಎಲ್ಲ ಕಾಲಂಗಳಲ್ಲಿ ಅನ್ವಯವಾಗುವುದಿಲ್ಲ ಎಂದು ನಮೂದಿಸಿದ್ದಾರೆ.

ಆದರೆ ಈಗಿನ ಖಾತೆ ವಿವರಗಳನ್ನು ಸೂರಜ್ ಉದ್ದೇಶಪೂರ್ವಕವಾಗಿ ನೀಡದೆ ಮುಚ್ಚಿಟ್ಟಿದ್ದಾರೆ ಎಂದು ಹರೀಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಕಾರಣ ಸೂರಜ್ ರೇವಣ್ಣ ವಿರುದ್ಧ ಹೈಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಲಾಗಿದೆ. ಅರ್ಜಿಗೆ ಸಂಬಂಧಪಟ್ಟಂತೆ ಮುಂದಿನ ವಿಚಾರಣೆ ಸೋಮವಾರ ನಡೆಯಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top