fbpx
ಸಮಾಚಾರ

ವಿಕ್ರಾಂತ್ ರೋಣ ರಿಲೀಸ್ ಯಾವಾಗ..? ರಿಲೀಸ್‌ ಡೇಟ್‌ ಅನೌನ್ಸ್‌

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈಗಾಗಲೇ ಟೀಸರ್, ವಿಭಿನ್ನ ಪೋಸ್ಟರ್ಗಳ ಮೂಲಕ ಗಮನ ಸೆಳೆದಿರುವ ‘ವಿಕ್ರಾಂತ್ ರೋಣ’ ಚಿತ್ರವನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಸಿನಿಮಾ ರಿಲೀಸ್ ಮಾಡುವತ್ತ ಗಮನಹರಿಸಿದೆ. ಇದೀಗ ‘ವಿಕ್ರಾಂತ್ ರೋಣ’ ಚಿತ್ರವು ಅದ್ಧೂರಿಯಾಗಿ ತೆರೆಯ ಮೇಲೆ ಬರಲು ಸಜ್ಜಾಗಿದ್ದು, ಚಿತ್ರದ ರಿಲೀಸ್‌ ದಿನಾಂಕದ ಬಗ್ಗೆ ಚಿತ್ರತಂಡ ಮಾಹಿತಿಯನ್ನು ಹಂಚಿಕೊಂಡಿದೆ.

 

 

ಸಿನಿಮಾ ಬಿಡುಗಡೆ ಕುರಿತು ನಟ ಸುದೀಪ್‌ ಟ್ವೀಟ್‌ ಮಾಡಿದ್ದಾರೆ. ಚಿತ್ರದ ರಿಲೀಸ್‌ ದಿನಾಂಕ ಇರುವ ಪೋಸ್ಟರ್‌ ಅನ್ನು ಹಂಚಿಕೊಂಡಿರುವ ಸುದೀಪ್‌, ಡಿ.7ರಂದು ಸಿನಿಮಾ ತೆರೆ ಕಾಣಲಿದೆ ಎಂದು ತಿಳಿಸಿದ್ದಾರೆ.

‘ವಿಕ್ರಾಂತ್ ರೋಣ’ ಚಿತ್ರವು ‘3ಡಿ’ಯಲ್ಲಿ ತೆರೆಕಾಣಲಿದ್ದು, ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನಲ್ಲಿ ಸ್ವತಃ ಸುದೀಪ್‌ ಅವರೇ ಡಬ್ಬಿಂಗ್‌ ಮಾಡಿದ್ದಾರೆ. ಈ ಹಿಂದೆ ಆಗಸ್ಟ್‌ 19ರಂದೇ ತೆರೆಯ ಮೇಲೆ ಬರಬೇಕಿದ್ದ ಈ ಚಿತ್ರ, ಕೊರೊನಾ ಲಾಕ್‌ಡೌನ್‌ ಕಾರಣದಿಂದ ಮುಂದೂಡಲ್ಪಟ್ಟಿತ್ತು. ವಿಶೇಷವಾಗಿ ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್‌ ಖಲೀಫಾ ಮೇಲೆ ‘ವಿಕ್ರಾಂತ್ ರೋಣ’ ಚಿತ್ರದ ಟೀಸರ್‌ ಬಿಡುಗಡೆಯಾಗಿ ಇಡೀ ವಿಶ್ವದ ಗಮನಸೆಳೆದಿತ್ತು.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top