fbpx
ಉದ್ಯೋಗ

ಕಲ್ಲಿದ್ದಲ್ಲು ಪ್ರಾಧಿಕಾರದಲ್ಲಿ ನೇಮಕಾತಿ: 1295 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉತ್ತರ ಕೋಲ್‌ಫೀಲ್ಡ್‌ ಲಿಮಿಟೆಡ್ (Northern Coalfields Limited) ಅಗತ್ಯ ಐಟಿಐ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿನ ಕೇಂದ್ರಗಳಲ್ಲಿ ನೇಮಕ ಮಾಡಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ಹುದ್ದೆಗಳ ಸಂಖ್ಯೆ:
ವೆಲ್ಡರ್ (ಗ್ಯಾಸ್ / ಇಲೆಕ್ಟ್ರಿಕಲ್): 88 ಹುದ್ದೆಗಳು
ಫಿಟ್ಟರ್: 685 ಹುದ್ದೆಗಳು
ಇಲೆಕ್ಟ್ರೀಷಿಯನ್: 430 ಹುದ್ದೆಗಳು
ಮೋಟಾರು ಮೆಕ್ಯಾನಿಕ್: 92 ಹುದ್ದೆಗಳು

ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯ / ಬೋರ್ಡ್ ಯಿಂದ 8 ನೇ, 10 ನೇ ತರಗತಿಯೊಂದಿಗೆ ಐಟಿಐ (In Relevant Trades) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ಅಧಿಕೃತ ಅಧಿಸೂಚನೆಯಂತೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ವರ್ಗಾವಾರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.

ವಯೋಮಿತಿ :
ಅರ್ಜಿ ಸಲ್ಲಿಸಲು ಕನಿಷ್ಠ 16 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು.

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಉತ್ತರ ಕೋಲ್‌ಫೀಲ್ಡ್‌ ಲಿಮಿಟೆಡ್‌ನ ಅಧಿಕೃತ ವೆಬ್ ಸೈಟ್ http://nclcil.in/ ಗೆ ಭೇಟಿ ನೀಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top