fbpx
ಸಮಾಚಾರ

ಓಮಿಕ್ರಾನ್ ಸೋಂಕಿನಿಂದ ಗುಣಮುಖನಾದವನಿಗೆ ವಕ್ಕರಿಸೀತು ಕೊರೋನಾ!

ಇಡೀ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದವು. ಎಲ್ಲಾ ಕಡೆ ಓಮಿಕ್ರಾನ್ ಹೊಸ ರೂಪಾಂತರಿಯ ದುಗುಡ ಹೆಚ್ಚಾಗುತೊಡಗಿದೆ. ಡೆಲ್ಟಾ ರೂಪಾಂತರಿಯಿಂದ ಭೀತಿಗೊಳಗಾಗಿದ್ದ ವಿಶ್ವದ ರಾಷ್ಟ್ರಗಳು ಓಮಿಕ್ರಾನ್ ಹೊಸ ರೂಪಾಂತರಿಯಿಂದಾಗಿ ಮತ್ತೆ ಭೀತಿ ಆವರಿಸತೊಡಗಿದೆ. ಓಮಿಕ್ರಾನ್ ಸೋಂಕಿಗೆ ಸಿಲುಕಿ ಗುಣಮುಖರಾಗಿದ್ದ ಬೆಂಗಳೂರಿನ 46 ವರ್ಷದ ವೈದ್ಯರಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

24 ನವೆಂಬರ್ 2021 ರಂದು ದಕ್ಷಿಣ ಆಫ್ರಿಕಾದಲ್ಲಿ ಕರೋನಾ, ಓಮಿಕ್ರಾನ್‌ನ ಹೊಸ ರೂಪಾಂತರದ ಮೊದಲ ಪ್ರಕರಣ ಪತ್ತೆಯಾಯಿತು. ದಕ್ಷಿಣ ಆಫ್ರಿಕಾದ ಹೊರತಾಗಿ, ಈ ರೂಪಾಂತರವನ್ನು ಯುನೈಟೆಡ್ ಕಿಂಗ್‌ಡಮ್, ಜರ್ಮನಿ, ಇಟಲಿ, ಬೆಲ್ಜಿಯಂ, ಬೋಟ್ಸ್‌ವಾನಾ, ಹಾಂಗ್ ಕಾಂಗ್ ಮತ್ತು ಇಸ್ರೇಲ್‌ನಲ್ಲಿಯೂ ಗುರುತಿಸಲಾಗಿದೆ. ಈ ರೂಪಾಂತರವು ಕಾಣಿಸಿಕೊಂಡ ನಂತರ, ಪ್ರಪಂಚದ ಅನೇಕ ದೇಶಗಳು ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಕರನ್ನು ನಿಷೇಧಿಸಿವೆ.

ಕರ್ನಾಟಕದಲ್ಲಿ ಎರಡು ಜಿನೋಮಿಕ್ ಸೀಕ್ವೆನ್ಸ್ ಲ್ಯಾಬ್ ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ. ಭಾರತದಲ್ಲಿ ದಿನೇ ದಿನೇ ಓಮಿಕ್ರಾನ್ ಹೆಚ್ಚುತ್ತಿದ್ದು, ಈವರೆಗೆ 23 ಮಂದಿ ಓಮಿಕ್ರಾನ್ ಸೋಂಕಿಗೆ ಸಿಲುಕಿದ್ದಾರೆ. ಮಹಾರಾಷ್ಟ್ರದಲ್ಲಿ 10, ರಾಜಸ್ಥಾನದಲ್ಲಿ 9 ಪ್ರಕರಣಗಳು ಪತ್ತೆಯಾಗಿವೆ. ಸೋಂಕು ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಗಿ ಕ್ರಮಗಳನ್ನು ಕೈಗೊಂಡಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top