fbpx
ಸಮಾಚಾರ

21 ವರ್ಷಗಳ ಬಳಿಕ ಭಾರತಕ್ಕೆ ಭುವನ ಸುಂದರಿ ಪಟ್ಟ: ಕಿರೀಟ ತೊಟ್ಟ ಪಂಜಾಬ್ ಮೂಲದ ಹರ್ನಾಜ್ ಸಂಧು

ಭಾರತಕ್ಕೆ ಸುಮಾರು 21 ವರ್ಷಗಳ ಬಳಿಕ ಮತ್ತೆ ಭುವನ ಸುಂದರಿ ಕಿರೀಟ ಒಲಿದಿದೆ. 2021ನೇ ಸಾಲಿನ ಮಿಸ್ ಯೂನಿವರ್ಸ್ ಪಟ್ಟ ಪಂಜಾಬ್ ಮೂಲದ ಹರ್ನಾಜ್ ಸಂಧು ‘ಮಿಸ್ ಯೂನಿವರ್ಸ್’ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. 2000ನೇ ಇಸವಿಯಲ್ಲಿ ಲಾರಾ ದತ್ತಾ ‘ಭುವನ ಸುಂದರಿ’ ಕಿರೀಟ ಪಡೆದಿದ್ದರು. ಈಗ 21 ವರ್ಷಗಳ ನಂತರ ಹರ್ನಾಜ್ ಕೌರ್ ಸಂಧು ಅವರು ಮತ್ತೊಮ್ಮೆ ಹೆಮ್ಮೆ ತಂದಿದ್ದಾರೆ.

 

 

ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರನ್ನು ಹಿಂದಿಕ್ಕಿ ಕಿರೀಟ ಧರಿಸಿಕೊಂಡಿದ್ದಾರೆ. ಮೆಕ್ಸಿಕೋ ದೇಶದ 2020ರ ಮಾಜಿ ಭುವನ ಸುಂದರಿ ಆಂಡ್ರಿಯಾ ಮೆಜಾ ಅವರು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಕರತಾಡನ ಮಧ್ಯೆ ಸಂಧು ಅವರಿಗೆ ಕಿರೀಟ ತೊಡಿಸಿದರು. ಜಾಗತಿಕ ಮಟ್ಟದಲ್ಲಿ ಕಾರ್ಯಕ್ರಮದ ನೇರ ಪ್ರಸಾರವಾಗಿದೆ.

ಪರಾಗ್ವೆಯ 22 ವರ್ಷದ ನಾಡಿಯಾ ಫೆರೆರಾ ಎರಡನೇ ಸ್ಥಾನ ಹಾಗೂ ದಕ್ಷಿಣ ಆಫ್ರಿಕಾದ 24 ವರ್ಷದ ಲಲೇಲಾ ಸ್ವಾನ್‌ ಮೂರನೇ ಸ್ಥಾನ ಪಡೆದರು.

‘ನನ್ನನ್ನು ಬೆಂಬಲಿಸಿದ್ದಕ್ಕಾಗಿ ದೇವರು, ಪೋಷಕರು ಹಾಗೂ ಮಿಸ್ ಇಂಡಿಯಾ ಸಂಸ್ಥೆಗೆ ನಾನು ಕೃತಜ್ಞನಾಗಿದ್ದೇನೆ. ನನ್ನ ಗೆಲುವಿಗಾಗಿ ಪ್ರಾರ್ಥಿಸಿದ ಹಾಗೂ ಹಾರೈಸಿದ ಪ್ರತಿಯೊಬ್ಬರಿಗೂ ಅಪಾರ ಪ್ರೀತಿಯನ್ನು ಸಲ್ಲಿಸುತ್ತಿದ್ದೇನೆ. 21 ವರ್ಷಗಳ ಬಳಿಕ ಭಾರತಕ್ಕೆ ಕಿರೀಟದ ವೈಭವ ಮರಳಿ ತರಲು ಸಾಧ್ಯವಾಗಿರುವುದು ಹೆಮ್ಮೆಯ ಕ್ಷಣ’ ಎಂದು ಹರ್ನಾಜ್‌ ಕೌರ್‌ ಸಂಧು ಪ್ರತಿಕ್ರಿಯಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top