ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದೈಹಿಕವಾಗಿ ನಮ್ಮಿಂದ ದೂರವಾಗಿ ಬರೋಬ್ಬರಿ ಒಂದು ತಿಂಗಳಿಗಿಂತ ಜಾಸ್ತಿ ಕಳೆದುಹೋಗಿದೆ. ಗಟ್ಟಿಮುಟ್ಟಾಗಿದ್ದ ಆರೋಗ್ಯವಂತ ಅಪ್ಪು ಇದ್ದಕ್ಕಿಂತ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಇಡೀ ಕರ್ನಾಟಕಕ್ಕೆ ಸಿಡಿಲು ಬಡಿದಂತೆ ಬಡಿದಿತ್ತು. ಅಪ್ಪು ಆಗಲಿ ಒಂದು ತಿಂಗಳೇ ಕಳೆದಿದ್ದರೂ ಅದರಿಂದ ಕನ್ನಡಿಗರ ಮನಸ್ಸಿಗೆ ಆಗಿರುವ ನೋವಿನ ಪ್ರಮಾಣ ಕಡಿಮೆಯಾಗಿಲ್ಲ.
Started dubbing for #Luckyman movie. Dubbing these scenes were the toughest part.
Shooting for this film with Appu sir was very special and it will remain special forever ❤️ pic.twitter.com/YL76BTLlaj— darling krishna (@darlingkrishnaa) December 11, 2021
ನಟ ಪುನೀತ್ ರಾಜ್ಕುಮಾರ್ ಅವರು ಜೇಮ್ಸ್ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅದು ಅವರು ಹೀರೋ ಆಗಿ ಅಭಿಸಿರುವ ಕೊನೆಯ ಚಿತ್ರ. ಜೊತೆಗೆ ಪುನೀತ್ ಡಾರ್ಲಿಂಗ್ ಕೃಷ್ಣ ಹೀರೋ ಆಗಿ ನಟಿಸಿರುವ ‘ಲಕ್ಕಿ ಮ್ಯಾನ್’ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿದ್ದಾರೆ. ಸದ್ಯ ಲಕ್ಕಿ ಮ್ಯಾನ್ ಚಿತ್ರದ ಸಣ್ಣ ವಿಡಿಯೋ ತುಣುಕು ಒಂದನ್ನು ನಟ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಕಂಡು ಅಪ್ಪು ಅಭಿಮಾನಿಗಳು ಭಾವುಕ ಆಗಿದದ್ದಾರೆ.
‘ಲಕ್ಕಿ ಮ್ಯಾನ್’ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಆ ಸಿನಿಮಾದ ಡಬ್ಬಿಂಗ್ ಕೆಲಸಗಳು ಈಗ ನಡೆಯುತ್ತಿವೆ. ಡಬ್ಬಿಂಗ್ ಮಾಡುತ್ತಿರುವ ಅನುಭವವನ್ನು ಡಾರ್ಲಿಂಗ್ ಕೃಷ್ಣ ವಿಡಿಯೋ ಸಮೇತ ಹಂಚಿಕೊಂಡಿದ್ದಾರೆ.
ಡಬ್ಬಿಂಗ್ ಅನುಭವದ ಬಗ್ಗೆ ಬರೆದುಕೊಂಡಿರುವ ಡಾರ್ಲಿಂಗ್ ಕೃಷ್ಣ, ‘ಲಕ್ಕಿಮ್ಯಾನ್ ಸಿನಿಮಾಗೆ ಡಬ್ಬಿಂಗ್ ಶುರು ಮಾಡಿದೆ. ಈ ದೃಶ್ಯಗಳನ್ನು ಡಬ್ಬಿಂಗ್ ಮಾಡುವುದು ಅತ್ಯಂತ ಕಷ್ಟಕರವಾದ ಭಾಗವಾಗಿತ್ತು. ಅಪ್ಪು ಸರ್ ಜೊತೆಗಿನ ಈ ಚಿತ್ರದ ಶೂಟಿಂಗ್ ತುಂಬಾ ವಿಶೇಷವಾಗಿತ್ತು ಮತ್ತು ಇದು ಎಂದೆಂದಿಗೂ ವಿಶೇಷವಾಗಿ ಉಳಿಯುತ್ತದೆ’ ಎಂದು ಬರೆದುಕೊಳ್ಳುವುದರ ಜತೆಗೆ ಒಂದು ಸಣ್ಣ ವಿಡಿಯೋ ಕ್ಲಿಪ್ ಕೂಡ ಪೋಸ್ಟ್ ಮಾಡಿದ್ದಾರೆ. ಇದನ್ನು ನೋಡಿ ಸಾಕಷ್ಟು ಮಂದಿ ಭಾವುಕರಾಗಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
