fbpx
ಸಮಾಚಾರ

ಬಿಜೆಪಿ ಸೇರ್ಪಡೆ ವಿಚಾರ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದೇನು?

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಅವರು ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸದ್ಯದಲ್ಲೇ ಪಂಜಾಬ್ ರಾಜ್ಯಕ್ಕೆ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಆ ಚುನಾವಣೆಯಲ್ಲಿ ಹರ್ಭಜನ್ ಸಿಂಗ್ ಅವರು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬೆಲ್ಲಾ ಗಾಸಿಪ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ಸುದ್ದಿಗಳಿಗೆ ಇದೀಗ ಸ್ವತಃ ಹರ್ಭಜನ್ ಸಿಂಗ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

 

 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹರ್ಭಜನ್ ಸಿಂಗ್ ಅವರು ತಾವು ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಾವು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು, ಜನರು ಇಂತಹ ವದಂತಿಗಳನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ.

ಭಜ್ಜಿ ಜೊತೆಗೆ ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರ ಬಗ್ಗೆ ಕೂಡ ಇದೇ ರೀತಿಯ ಪ್ರಚಾರ ನಡೆಯುತ್ತಿದೆ. ಈ ವಿಷಯದ ಬಗ್ಗೆ ಯುವಿ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top