fbpx
ಸಮಾಚಾರ

ಕೋವಿಡ್ ಲಸಿಕಾ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಇದ್ರೆ ಏನು ತೊಂದರೆ? – ಹೈಕೋರ್ಟ್‌ ಪ್ರಶ್ನೆ

ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವ ಬಗ್ಗೆ ಪ್ರಶ್ನಿಸಿ ಕೇರಳದ ವ್ಯಕ್ತಿಯೊಬ್ಬರು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತಂತೆ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋದ ಬಗ್ಗೆ ಯಾಕೆ ಪ್ರಶ್ನಿಸುತ್ತೀರಿ? ಈ ಬಗ್ಗೆ ನೀವು ಹೆಮ್ಮೆ ಪಡಬೇಕು ಎಂದು ಕೇರಳ ಹೈಕೋರ್ಟ್ ಚಾಟಿ ಬೀಸಿದೆ.

ಕೊಟ್ಟಾಯಂನ ಪೀಟರ್ ಮಾಯಲಿಪರಂಬಿಲ್ ಅವರು ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಫೋಟೋಗೆ ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮೋದಿ ಭಾವಚಿತ್ರ ಇಲ್ಲದ ಪ್ರಮಾಣ ಪತ್ರ ನೀಡುವಂತೆ ಮನವಿ ಮಾಡಿದ್ದರು.

ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಫೋಟೋ ಹಾಕಿರುವ ಬಗ್ಗೆ ಮಾಹಿತಿ ಹಕ್ಕು ಕಾರ್ಯಕರ್ತರು ಪ್ರಶ್ನೆ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಕೃಷ್ಣನ್ “ಅವರು ನಮ್ಮ ಪ್ರಧಾನಿಯೇ ಹೊರತು ಅಮೆರಿಕದ ಪ್ರಧಾನಿಯಲ್ಲ. ಮೋದಿಯವರು ಅಧಿಕಾರಕ್ಕೆ ಬಂದದ್ದು ಜನಾದೇಶದಿಂದ ಹೊರತು ಯಾವುದೇ ಶಾರ್ಟ್‌ಕಟ್‌ಗಳ ಮೂಲಕ ಅಲ್ಲ” ಎಂದು ನ್ಯಾಯಮೂರ್ತಿ ಅವರು ಹೇಳಿದ್ದಾರೆ.

“ನೀವು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಹೆಸರಿನ ಸಂಸ್ಥೆಯೊಂದಿಗೆ ಕೆಲಸ ಮಾಡುತ್ತಿದ್ದೀರಿ, ಆ ಸಂಸ್ಥೆಯಿಂದ ನೆಹರು ಹೆಸರನ್ನು ತೆಗೆದುಹಾಕುವ ನಿಲುವನ್ನು ನೀವು ಏಕೆ ತೆಗೆದುಕೊಳ್ಳುತ್ತಿಲ್ಲ? ಮೋದಿ ನಮ್ಮ ಪ್ರಧಾನಿ, ನಿಮಗೆ ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿಯವರ ಫೋಟೋದಿಂದ ನಿಮೆಗ ಏನು ಸಮಸ್ಯೆ ಅಂತ ನನಗೆ ಅರ್ಥವಾಗುತ್ತಿಲ್ಲ ಎಂದು ನ್ಯಾಯಾಲಯ ಹೇಳಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top