fbpx
ಸಮಾಚಾರ

“ಸಿದ್ದರಾಮಯ್ಯ ಒಬ್ಬ ವೇಸ್ಟ್​ ಬಾಡಿ” ರಮೇಶ್ ಜಾರಕಿಹೊಳಿ ವಾಗ್ದಾಳಿ

ಕಾಂಗ್ರೆಸ್‌ನಿಂದ ಬಂಡಾಯ ಎದ್ದು ಬಿಜೆಪಿ ಸೇರಿದಾಗಲೂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು ಎನ್ನುತ್ತಿದ್ದ ಶಾಸಕ ರಮೇಶ್‌ ಜಾರಕಿಹೊಳಿ ಅವರು, ಈಗ ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ. ಹೀಗಾಗಿ ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ. ಸಿದ್ದರಾಮಯ್ಯ ವೇಸ್ಟ್ ಬಾಡಿ. ಸಿದ್ದರಾಮಯ್ಯರದ್ದು ಮುಗಿದ ಕಥೆ, ಮುಂದಿನ ಬಾರಿ ಸೋಲ್ತಾನೆ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿಯೇ ರಮೇಶ್ ವಾಗ್ದಾಳಿ ನಡೆಸಿದರು.

ನಮ್ಮ ಪಕ್ಷ ಸೋಲಬಾರದಿತ್ತು, ಸೋತಿದೆ, ಮುಂದಿನ ದಿನಗಳಲ್ಲಿ ಎಲ್ಲ ಹೇಳುತ್ತೇನೆ ಎಂದು ಮಾರ್ಮಿಕವಾಗಿ ಉತ್ತರಿಸಿದರು. ಇನ್ನು ಪಕ್ಷದಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಅಭ್ಯರ್ಥಿಯ ಸೋಲಿಗೆ ಕಾರಣರಾಗಿರುವ ಜಾರಕಿಹೊಳಿ ಬ್ರದರ್ಸ್ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕಾರ್ಯಕರ್ತರಿಂದ ಬೆಳಗಾವಿಯಲ್ಲಿ ಕೇಳಿಬರುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top