ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿ ವಿಕೃತಿ ಮೆರದಿರುವ ಘಟನೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸಭಾ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತು ಶಿವಸೇನೆಯವರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಅಲ್ಲಿನ ಅಧ್ಯಕ್ಷ ದೀಪಕ ದಳವಿ ಎಂಬಾತನಿಗೆ ಕನ್ನಡಪರ ಹೋರಾಟಗಾರ ಮಸಿ ಎರಚಿದ್ದರು.. ಇದನ್ನು ಖಂಡಿಸಿ, ಪ್ರತಿಭಟನೆ ಶಿವಸೇನೆ ಪುಂಡರು ಕನ್ನಡ ಬಾವುಟವನ್ನು ಸುಟ್ಟು ಹಾಕಿ ವಿಕೃತಿ ಮೆರೆದಿದ್ದಾರೆ.
ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ಸಮಯದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಕಿಡಿಗೇಡಿತನ ಮಾಡಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಧ್ವಜಕ್ಕೆ ಬೆಂಕಿ ಹತ್ತುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕನ್ನದ ಧ್ವಜ ಸುಟ್ಟಿರುವ ವಿರುದ್ಧ ಟ್ವಿಟರ್ ನಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನಕ್ಕೆ ಇದೀಗ ನಟ ದರ್ಶನ್ ಬೆಂಬಲ ನೀಡಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ದರ್ಶನ್ ಕನ್ನಡಿಗರ ಪರವಾಗಿ ಕನ್ನಡ ಧ್ವಜ ಸುತ್ತ ಅಪಾಪೋಲಿಗಳ ವಿರುದ್ಧ ಗುಡುಗಿದ್ದಾರೆ..
“ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ ” ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರೆದುಕೊಂಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
