fbpx
ಸಮಾಚಾರ

ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ

ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21 ವರ್ಷಕ್ಕೆ ಮಹಿಳೆಯರ ವಿವಾಹದ ವಯಸ್ಸು ಹೆಚ್ಚಿಸಲು ಕ್ಯಾಬಿನೆಟ್ ಒಪ್ಪಿಗೆ ಸಿಕ್ಕಿದ್ದು, ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ದೇಶದ 74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಅಂದರೆ 2020ರ ಆಗಸ್ಟ್‌ 15ರಂದು ರಾಷ್ಟ್ರವನ್ನು ಉದ್ದೇಶಿಸೀ ಪ್ರಧಾನಿ ಮೋದಿ ಭಾಷಣ ಮಾಡುವಾಗ ಈ ವಿಚಾರವನ್ನು ಪ್ರಸ್ತಾಪಸಿದ್ದರು.

ಮೊದಲ ಗರ್ಭಧಾರಣೆಯ ಸಮಯದಲ್ಲಿ ಮಹಿಳೆಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎಂದು ಟಾಸ್ಕ್‌ ಫೋರ್ಸ್‌ ಪ್ರತಿಪಾದಿಸಿದ್ದ ಪ್ರಸ್ತಾವನೆಯ ಶಿಫಾರಸುಗಳನ್ನು ಡಿಸೆಂಬರ್‌ನಲ್ಲಿ ಸಲ್ಲಿಸಲಾಯಿತು. ಸದ್ಯ ಇರುವ ಕಾನೂನಿನ ಪ್ರಕಾರ ನಿಗದಿಪಡಿಸಲಾಗಿರುವ ವಿವಾಹದ ವಯಸ್ಸು ಗಂಡುಮಕ್ಕಳಿಗೆ 21 ಹಾಗೂ ಹೆಣ್ಣುಮಕ್ಕಳಿಗೆ 18 ವರ್ಷ ಆಗಿತ್ತು. ಈ ಹಿನ್ನೆಲೆಯಲ್ಲಿ ಹೊಸ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಾಲ್ಯವಿವಾಹ ನಿಷೇಧ ಕಾಯಿದೆ ವಿಶೇಷ ವಿವಾಹ ಕಾಯಿದೆ ಮತ್ತು ಹಿಂದೂ ವಿವಾಹ ಕಾಯಿದೆಗಳಲ್ಲಿ ಸರ್ಕಾರ ಬದಲಾವಣೆ ಮಾಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top