fbpx
ಸಮಾಚಾರ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಜ್ಜಿ ಶತಾಯುಷಿ ನಿಂಗಮ್ಮ ನಿಧನ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿ ಅಧಿವೇಷನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ ದಯಾನಂದಸಾಗರ‌ ಆಸ್ಪತ್ರೆಯಲ್ಲಿ ಡಿಕೆಶಿ ಅಜ್ಜಿ ನಿಂಗಮ್ಮ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಆದಷ್ಟು ಬೇಗ ಬೆಳಗಾವಿಯಿಂದ ಡಿಕೆಶಿ ಕನಕಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಅಜ್ಜಿ ನಿಂಗಮ್ಮ ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು. 106 ವರ್ಷ ವಯಸ್ಸಿನ ನಿಂಗಮ್ಮ ವಯೋಸಹಜ ಕಾಯಿಲೆಯಿಂದ ಬಲತ್ತಿದ್ದರು ಎನ್ನಲಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ಕನಕಪುರ ತಾಲ್ಲೂಕಿನ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಸಂಜೆ 4.30 ಕ್ಕೆ ನಡೆಯಲಿದೆ.

ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಶುಕ್ರವಾರದ ಕಲಾಪದಲ್ಲಿ ಭಾಗವಹಿಸುವುದನ್ನು ಮೊಟಕುಗೊಳಿಸಿ, ಬೆಳಗಾವಿಯಿಂದ 12 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ, ನಂತರ ಅಲ್ಲಿಂದ ದೊಡ್ಡಾಲಹಳ್ಳಿಗೆ ತೆರಳಿ, ಅಜ್ಜಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top