fbpx
ಸಮಾಚಾರ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐನ ಪ್ರಸ್ತುತ ಅಧ್ಯಕ್ಷ ಸೌರವ್ ಗಂಗೂಲಿಗೆ ಇತ್ತೀಚಿಗೆ ಅಸ್ವಸ್ಥರಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದೀಗ ಅವರಿಗೆ ಕೋವಿಡ್ -19 ಇರುವುದು ದೃಡಪಟ್ಟಿದೆ. ಕೋವಿಡ್ ವೈರಸ್‌ನ ಲಕ್ಷಣಗಳು ಕಾಣಿಸಿಕೊಂಡಿದ್ದ ಬೆನ್ನಲ್ಲೇ ಸೌರವ್ ಗಂಗೂಲಿ ಕೋವಿಡ್‌ 19 ಪರೀಕ್ಷೆಗೆ ಒಳಪಟ್ಟಿದ್ದರು. ಸೌಮ್ಯ ರೋಗಲಕ್ಷಣಗಳೊಂದಿಗೆ ಕೋಲ್ಕತ್ತಾದ ವುಡ್‌ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಗಂಗೂಲಿ ಅವರ ಅರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಅಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕೋವಿಡ್ ಪಾಸಿಟಿವ್ ಬಂದ ಹಿನ್ನಲೆ ಅವರನ್ನು ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದೇ ವರ್ಷದ ಜನವರಿಯಲ್ಲಿ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ನಂತರ ತಿಂಗಳಿಗೆ ಎರಡು ಬಾರಿ ಆಂಜಿಯೋಪ್ಲಾಸ್ಟಿ ಮಾಡಬೇಕಾಗಿತ್ತು. ಆದರೂ ಚೇತರಿಸಿಕೊಂಡರು ನಿರಂತರವಾಗಿ ಬಿಸಿಸಿಐನಲ್ಲಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಸೌರವ್ ಗಂಗೂಲಿ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ಹಾರೈಸಿದ್ದಾರೇ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top