fbpx
ಸಮಾಚಾರ

ಬಿಜೆಪಿ ಸೇರುವ ಮೂಲಕ ರಾಜಕೀಯ ಪ್ರವೇಶಿಸಿದ ಮಾಜಿ ಕ್ರಿಕೆಟಿಗ

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ದಿನೇಶ್ ಮೊಂಗಿಯಾ ಕ್ರಿಕೆಟ್ ನಂತರ ರಾಜಕೀಯದ ಪಿಚ್‌ನಲ್ಲಿ ಬಿಜೆಪಿ ಪರ ಬ್ಯಾಟಿಂಗ್ ಬೀಸಲಿದ್ದಾರೆ.

ಮೊಂಗಿಯಾ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ರಾಷ್ಟ್ರೀಯ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಪಂಜಾಬ್ ಚುನಾವಣೆಯಲ್ಲಿ ದಿನೇಶ್ ಮೊಂಗಿಯಾ ಸಕ್ರಿಯ ಪಾತ್ರ ವಹಿಸುವ ಸಾಧ್ಯತೆಯಿದ್ದು, ಹೀಗಾಗಿ ಅವರು ಪಕ್ಷಕ್ಕೆ ಸೇರಿದ್ದಾರೇ ಎನ್ನಲಾಗಿದೆ.

2001 ರಲ್ಲಿ ಭಾರತ ತಂಡದ ಪರ ಪದಾರ್ಪಣೆ ಮಾಡಿದ್ದ ದಿನೇಶ್ ಮೊಂಗಿಯಾ ಸೆಪ್ಟೆಂಬರ್ 2019 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. 2007 ರಲ್ಲಿ ಬಾಂಗ್ಲಾದೇಶದ ವಿರುದ್ಧ ಅವರು ಕೊನೆಯ ಬಾರಿ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ 12 ವರ್ಷಗಳ ಕಾಲ ಅವರು ದೇಶೀಯ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು. ಆದರೆ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲು ಸಾಧ್ಯವಾಗಿರಲಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top