fbpx
ಸಮಾಚಾರ

ಭಾರತದ ಎದುರಿನ ಸೋಲಿನ ಬೆನ್ನಲ್ಲೇ ಟೆಸ್ಟ್‌ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ ಡಿ ಕಾಕ್

ದಕ್ಷಿಣ ಆಫ್ರಿಕಾದ ವಿಕೆಟ್‌ಕೀಪರ್ ಹಾಗೂ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಸೆಂಚುರಿಯನ್‌ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಆರಂಭಿಕ ಟೆಸ್ಟ್‌ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 113 ರನ್‌ಗಳಿಂದ ಸೋಲಿಸಿತು. ಇದಾದ ಕೆಲವೇ ಗಂಟೆಗಳ ನಂತರ ಡಿ ಕಾಕ್ ಈ ದಿಢೀರ್ ಘೋಷಣೆ ಮಾಡಿದ್ದಾರೆ.

ಡಿ ಕಾಕ್ ಅವರ ಪತ್ನಿ ತುಂಬು ಗರ್ಭಿಣಿ. ಆದ್ದರಿಂದ ಭಾರತ ಎದುರಿನ ಎರಡನೇ ಮತ್ತು ಮೂರನೇ ಟೆಸ್ಟ್‌ಗೆ ಅವರು ಲಭ್ಯ ಇರುವುದಿಲ್ಲ ಎಂದು ಈಗಾಗಲೇ ತಿಳಿಸಲಾಗಿತ್ತು. ಆದರೆ ಈಗ ಟೆಸ್ಟ್ ಕ್ರಿಕೆಟ್ ಮಾದರಿಗೆ ವಿದಾಯ ಹೇಳಿರುವುದು ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದೆ.

ಈ ಪ್ರಮುಖ ವಿಷಯವನ್ನು ಕ್ರಿಕೆಟ್‌ ದಕ್ಷಿಣ ಆಫ್ರಿಕಾ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸ್ಪಷ್ಟಪಡಿಸಿದೆ. “ಹರಿಣಗಳ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಕ್ವಿಂಟನ್‌ ಡಿ ಕಾಕ್ ತಮ್ಮ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ಸಲುವಾಗಿ ತಕ್ಷಣ ಪರಿಣಾಮಕಾರಿಯಾಗುವಂತೆ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ,” ಎಂದು ಸಿಎಸ್‌ಎ ಟ್ವೀಟ್‌ ಮಾಡಿದೆ.

29 ವರ್ಷದ ಕ್ವಿಂಟನ್ ಡಿಕಾಕ್ ಅವರು ದಕ್ಷಿಣ ಆಫ್ರಿಕಾ ಪರ 54 ಟೆಸ್ಟ್ ಪಂದ್ಯವಾಡಿದ್ದು, 3,300 ರನ್ ಗಳಿಸಿದ್ದಾರೆ. 38.82ರ ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಅವರು ಆರು ಶತಕ ಮತ್ತು 22 ಅರ್ಧಶತಕ ಗಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top