fbpx
ಸಮಾಚಾರ

ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್​ಗಿರಿ ಹೆಸರು ಬದಲಿಸಲು ಶಿಕ್ಷಣ ಸಚಿವರ ಸೂಚನೆ

ಶಾಲಾ ಪಠ್ಯಪುಸ್ತಕಗಳಲ್ಲಿ ಇರುವ ಬಾಬಾಬುಡನ್​ಗಿರಿ ಹೆಸರಿನ ಬದಲಿಸಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ. ಬಾಬಾಬುಡನ್​ಗಿರಿ ಬದಲು ‘ಇನಾಮ್ ದತ್ತಾತ್ರೇಯ ಪೀಠ’ ಎಂದು ಮುದ್ರಿಸಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚಿಸಲಾಗಿದೆ.

ಕರ್ನಾಟಕ ರಾಜ್ಯ ಪಠ್ಯಕ್ರಮದ 4, 6 ಮತ್ತು 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್​ಗಿರಿ ಹೆಸರಿನ ಉಲ್ಲೇಖವಿದ್ದು ಸದರಿ ಸ್ಥಾನಗಳಲ್ಲಿ ‘ಇನಾಮ್ ದತ್ತಾತ್ರೇಯ ಪೀಠ’ ಎಂದು ಬದಲಿಸುವಂತೆ ಅವರು ಸೂಚಿಸಿದ್ದಾರೆ. ಈ ಕುರಿತು ಇತ್ತೀಚೆಗಷ್ಟೇ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಸಚಿವರ ಗಮನ ಸೆಳೆದಿದ್ದರು.

 

 

ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ಪತ್ರ ಬರೆದು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮದ 4, 6 ಮತ್ತು 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್​ಗಿರಿ ಹೆಸರು ಬದಲಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಶ್ರೀಗುರು ದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇರುವ ಸ್ಥಳವನ್ನು ಬಾಬಾಬುಡನ್​ಗಿರಿ ಎಂದು ಕರೆದಿರುವುದಕ್ಕೆ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಕರ್ನಾಟಕದ 4, 6 ಮತ್ತು 9ನೇ ತರಗತಿ ಪಠ್ಯಪುಸ್ತಕಗಳಲ್ಲಿ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಶ್ರೀಗುರು ದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇರುವ ಸ್ಥಳವನ್ನು ಬಾಬಾಬುಡನ್​ಗಿರಿ ಎಂದು ಕರೆದಿರುವುದಕ್ಕೆ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಪ್ರಾಣೇಶ್, ‘ಈ ಪ್ರದೇಶವನ್ನು ಸರ್ಕಾರಿ ದಾಖಲೆಗಳ ಪ್ರಕಾರ ನಮೂದಾಗಿರುವಂತೆ ‘ಇನಾಮ್ ದತ್ತಾತ್ರೇಯ ಪೀಠ’ (ದತ್ತಪೀಠ) ಎಂದೇ ಪಠ್ಯಪುಸ್ತಕಗಳಲ್ಲಿಯೂ ನಮೂದಿಸಬೇಕು’ ಎಂದು ಆಗ್ರಹಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top