fbpx
ಸಮಾಚಾರ

ನಮ್ಮ ಮೆಟ್ರೋದಲ್ಲಿ ನೇಮಕಾತಿ: ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ನಮ್ಮ ಮೆಟ್ರೋ ದಲ್ಲಿ 50 ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಕೊಟ್ಟು ಹುದ್ದೆಗಳ ಕುರಿತ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. ಅರ್ಜಿ ಸಲ್ಲಿಸಲು ಜನವರಿ 10,2022 ಕೊನೆಯ ದಿನಾಂಕವಾಗಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ :
ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :
ಜನವರಿ 1,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,040/- ರಿಂದ 63,490/-ರೂ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

2021 ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://english.bmrc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಂತರ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ ಕಚೇರಿ ವಿಳಾಸಕ್ಕೆ ಜನವರಿ 14,2022ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top