fbpx
ಸಮಾಚಾರ

ಗುಡ್ ನ್ಯೂಸ್ ಹಂಚಿಕೊಂಡ ನಟಿ ಸಂಜನಾ: ಅಮ್ಮಾ ಆಗ್ತಿದ್ದಾರೆ ಕನ್ನಡದ ನಟಿ, ಗಂಡು ಮಗುವೇ ಆಗುತ್ತಂತೆ!

ನಟಿ ಸಂಜನಾ ಗಲ್ರಾನಿ ಹೊಸ ವರ್ಷಕ್ಕೆ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಅವರು ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ಕುರಿತು ಅವರು ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಅವರು 5ನೇ ತಿಂಗಳ ಗರ್ಭಿಣಿ. 2022ರ ಮೇ ತಿಂಗಳಲ್ಲಿ ಮಗುವಿನ ಆಗಮನ ಆಗಲಿದೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ‘ನಾನೀಗ 5 ತಿಂಗಳ ಗರ್ಭಿಣಿ” ಎಂದು ಹೇಳಿಕೊಂಡಿದ್ದಾರೆ. ” ನನಗೆ ನನ್ನ ಬದುಕಿಗೆ ತುಂಬಾನೇ ಧನ್ಯತೆ ಇದೆ. ಇದೊಂದು ಸುಂದರ ಜರ್ನಿ. ನನಗೆ ಗಂಡು ಮಗು ಆಗಲಿದೆ ಎನ್ನುವ ಭಾವನೆ ನನಗೆ ಬರುತ್ತಿದೆ.” ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಗಂಡು ಮಗುವೇ ಜನಿಸುತ್ತದೆ ಎಂಬ ಆತ್ಮವಿಶ್ವಾಸದಲ್ಲಿದ್ದಾರೆ ನಟಿ ಸಂಜನಾ

ನಟಿ ಸಂಜನಾ ಮುಸ್ಲಿಂ ಸಂಪ್ರದಾಯದಲ್ಲಿ ವೈದ್ಯ ಅಜೀಜ್ ಪಾಷ ಅವರನ್ನು ಮದುವೆಯಾಗಿದ್ದರು. ಇದಕ್ಕೆ ಪೂರಕ ಎಂಬಂತೆ ಮದುವೆಯ ಫೋಟೋ ಕೂಡ ವೈರಲ್ ಆಗಿತ್ತು. ಅಜೀಜ್ ಪಾಷ ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾರೆ. ಡ್ರಗ್ಸ್ ವಿವಾದದ ವೇಳೆ ಸಂಜನಾ ಮದುವೆ ವಿಚಾರ ಹೊರಬಂದಿತ್ತು. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top