fbpx
ಸಮಾಚಾರ

ಲೈಂಗಿಕ ಕಿರುಕುಳ ಪ್ರಕರಣ: ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್, ಮೂರು ವರ್ಷಗಳ ನಂತರ ಗೆದ್ದ ‘ಆಕ್ಷನ್ ಕಿಂಗ್’

ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಈ ಹಿಂದೆ ದೌರ್ಜನ್ಯ ಆರೋಪ ಮಾಡಿದ್ದರು. ಈ ಸಂಬಂಧ 2018ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೇಸ್​ ದಾಖಲಾಗಿ ಮೂರು ವರ್ಷದ ನಂತರ ಅರ್ಜುನ್ ಸರ್ಜಾಗೆ ಜಯ ಸಿಕ್ಕಿದೆ. ನಟ ಅರ್ಜುನ್​ ಸರ್ಜಾ ವಿರುದ್ಧ ಸೂಕ್ತ ಸಾಕ್ಷಿ ಸಿಕ್ಕಿಲ್ಲ. ಆ ಕಾರಣದಿಂದ ಕಬ್ಬನ್​ ಪಾರ್ಕ್​ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಭಂದಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಶ್ರುತಿ ಹರಿಹರನ್‌ಗೆ ನೋಟಿಸ್ ನೀಡುವ ಮೂಲಕ ವಿಚಾರಣೆಯಲ್ಲಿ ಭಾಗಿಯಾಗುವಂತೆ ತಿಳಿಸಿದ್ದರು. ನೋಟಿಸ್ ನೀಡಿ ಮೂರು ದಿನಗಳಲ್ಲಿ ವಿಚಾರಣೆಗೆ ಬಾರದಿದ್ದರೆ, ಯಾವುದೇ ಸಾಕ್ಷಿ ಇಲ್ಲವೆಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸುವುದಾಗಿಯೂ ಹೇಳಿದ್ದರು. ಮೂರು ದಿನ ಕಳಿದರೂ ಶ್ರುತಿ ವಿಚಾರಣೆಯಲ್ಲಿ ಭಾಗಿಯಾಗಿರಲಿಲ್ಲ ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸರು ಬಿ-ರಿಪೋರ್ಸ್ ಸಲ್ಲಿಸಿದ್ದಾರೆ. ಈ ಮೂಲಕ ಅರ್ಜುನ್ ಯಾವುದೇ ತಪ್ಪು ಮಾಡಿಲ್ಲ, ಶ್ರುತಿ ಬಳಿ ಸಾಕ್ಷಿ ಇಲ್ಲ ಎಂಬುದು ಸಾಬೀತಾಗಿದೆ. ಬಿ-ರಿಪೋರ್ಟ್‌ ಸಲ್ಲಿಸುವುದೆಂದರೆ ಆರೋಪಿ ಯಾವುದೇ ತಪ್ಪು ಮಾಡಿಲ್ಲ ಎಂದರ್ಥ.

ಪ್ರಕರಣಕ್ಕೆ ಸಂಭಂದಿಸಿದಂತೆ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಬೇಕಾಗಿರುವ ಸಾಕ್ಷ್ಯಾಧಾರಗಳು ದೊರೆಯಲಿಲ್ಲವೆಂದರೆ ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ರಿಪೋರ್ಟ್ ಅನ್ನೇ ಬಿ ರಿಪೋರ್ಟ್‌ ಎನ್ನುತ್ತಾರೆ. ಸದ್ಯ ನ್ಯಾಯಾಲಯ ಪೋಲೀಸರ ವರದಿಯನ್ನು ಒಪ್ಪಿರುವುದರಿಂದ ಪ್ರಕರಣದಲ್ಲಿ ಅರ್ಜುನ್​ ಸರ್ಜಾ ಯಾವುದೇ ತಪ್ಪು ಮಾಡಿಲ್ಲ ಎಂಬುದು ಸಾಬೀತಾದಂತಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top