fbpx
ಸಮಾಚಾರ

ರೋಹಿತ್, ರಾಹುಲ್,ಅಶ್ವಿನ್, ಬುಮ್ರಾ ಬೇಡ.. ಈತನನ್ನು ಟೆಸ್ಟ್ ಕ್ಯಾಪ್ಟನ್ ಮಾಡಿ: ಗಾವಸ್ಕರ್ ಹೆಸರಿಸಿ ಆ ಆಟಗಾರ ಯಾರು ?

ಟೆಸ್ಟ್ ಕ್ರಿಕೆಟ್ ನಲ್ಲಿ ಟೀಮ್ ಇಂಡಿಯಾ ಕಂಡ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದ ವಿರಾಟ್ ಕೊಹ್ಲಿ ನಿನ್ನೆ ಸಂಜೆ ದಿಡೀರನೆ ತಮ್ಮ ನಾಯಕತ್ವದಿಂದ ಕೆಳಗಿಳಿದರು. ಕಳೆದ ವರ್ಷ ಏಕದಿನ ಮತ್ತು ಟಿ-20 ಸ್ವರೂಪದ ಕ್ರಿಕೆಟ್ ಮಾದರಿಯ ನಾಯಕತ್ವದಿಂದ ವಿರಾಟ್ ಕೊಹ್ಲಿ ಅವರನ್ನು ಕೆಳಗಿಳಿಸಲಾಗಿತ್ತು. ಈಗ ಟೆಸ್ಟ್ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸಿ ಬಿಸಿಸಿಐಗೆ ಶಾಕ್ ನೀಡಿದ್ದಾರೆ ಕಿಂಗ್ ಕೊಹ್ಲಿ.

 

 

ಅತ್ತ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುತ್ತಿದ್ದಂತೆ ಇತ್ತ ಭಾರತಕ್ಕೆ ಮುಂದಿನ ನಾಯಕ ಯಾರು ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ರವಿ ಅಶ್ವಿನ್ ಹೀಗೆ ಹಲವು ಹಸೆರುಗಳು ಕೇಳಿ ಬರುತ್ತಿದೆ. ಈಗಾಗಲೇ ಏಕದಿನ ಮತ್ತು ಟ್ವೆಂಟಿ-20 ಟೀಮ್ ಇಂಡಿಯಾ ನಾಯಕರಾಗಿರುವ ರೋಹಿತ್ ಶರ್ಮಾ ಅವರೇ ತಂಡದ ನಾಯಕ ಸ್ಥಾನಕ್ಕೆ ಸೂಕ್ತ ಆಯ್ಕೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಇನ್ನೂ ಕೆಲವರು ವರ್ಕ್ಲೋಡ್ ಮ್ಯಾನೇಜ್ಮೆಂಟ್ ಅನ್ನೋ ಗಮನದಲ್ಲಿಟ್ಟುಕೊಂಡು ಕೆಎಲ್ ರಾಹುಲ್ ಅವರನ್ನು ಟೆಸ್ಟ್ ತಂಡಕ್ಕೆ ನಾಯಕನನ್ನಾಗಿ ಮಾಡಬೇಕು ಎಂದು ಹೇಳುತ್ತಿದ್ದಾರೆ.

ಈ ಮಧ್ಯೆ ಭಾರತದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಅವರು ಭಾರತ ತಂಡಕ್ಕೆ ಯಾರು ಮುಂದಿನ ನಾಯಕನಾಗಬೇಕು ಎಂಬುದನ್ನು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುನೀಲ್ ಗಾವಸ್ಕರ್, “ಭಾರತೀಯ ಕ್ರಿಕೆಟನ್ನು ಯಾರು ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ಆಯ್ಕೆ ಸಮಿತಿಯಲ್ಲಿ ಸಾಕಷ್ಟು ಚರ್ಚೆಯಾಗಲಿದೆ. ಮೂರು ಮಾದರಿಯ ತಂಡಕ್ಕೆ ನೇರವಾಗಿ ಆಯ್ಕೆಯಾಗುವ ಯಾರಾದರೂ ಆಗಿರಬೇಕು. ನೀವು ನನ್ನನ್ನು ಕೇಳಿದರೆ, ನಾನು ಭಾರತದ ಮುಂದಿನ ನಾಯಕನಾಗಿ ರಿಷಬ್ ಪಂತ್ ಅವರನ್ನು ನೋಡುತ್ತೇನೆ. ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ನಾಯಕರಾಗಿರುವ ಪಂತ್ ಅವರು ಭಾರತೀಯ ಕ್ರಿಕೆಟ್‌ ಅನ್ನು ಮುಂದಕ್ಕೆ ಕೊಂಡೊಯ್ಯುವ ಸಾಮರ್ಥ್ಯವನ್ನು ಹೊಂದಿದ್ದಾರೆಂದು ನಾನು ನಂಬುತ್ತೇನೆ, ” ಎಂದು ಗವಾಸ್ಕರ್ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top