fbpx
ಸಮಾಚಾರ

ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಭಾರೀ ಖರ್ಚು

ಮೇಕೆದಾಟು ಅಣೆಕಟ್ಟು ಯೋಜನೆ ಯ ಆರಂಭಕ್ಕಾಗಿ ಆಗ್ರಹಿಸಿ ಕಾಂಗ್ರೆಸ್ ಪಕ್ಷವು ಕೈಗೊಂಡಿದ್ದ ಪಾದಯಾತ್ರೆ ಸದ್ಯಕ್ಕೆ ಐದನೇ ದಿನಕ್ಕೆ ಸ್ಥಗಿತಗೊಂಡಿದ್ದು ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಲಾಗಿದೆ. ರಾಜ್ಯಾದ್ಯಂತ ಕೋರೋಣ ಮೂರನೇ ಅಲೆ ಜೋರಾಗಿದ್ದು ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿ ಕಾಣಬರುತ್ತಿರುವುದರಿಂದ ಕಾಂಗ್ರೆಸ್ ಪಕ್ಷವು ಪಾದಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿದೆ.

ಇನ್ನು ಈ ಪಾದಯಾತ್ರೆಗೆ ಭಾರಿ ಜನ ಬೆಂಬಲ ವ್ಯಕ್ತವಾಗಿತ್ತು. ಕನಕಪುರ ತಾಲ್ಲೂಕಿನ ಸಂಗಮದಿಂದ ಆರಂಭವಾದ ಈ ಪಾದಯಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಮುಖಂಡರುಗಳು ನಾಯಕರು ಹೆಜ್ಜೆ ಹಾಕಿದ್ದರು.. ಇದೀಗ ಸ್ಥಳೀಯ ಜನರು ಈ ಪಾದಯಾತ್ರೆಯನ್ನು ಚುನಾವಣಾ ರ್ಯಾಲಿಗೆ ಹೋಲಿಕೆ ಮಾಡುತ್ತಿದ್ದಾರೆ.

ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಪಕ್ಷ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದ ಪಾದಯಾತ್ರೆಯ ಬಗ್ಗೆ ಕೆಲವರು ಆಶ್ಚರ್ಯ ವ್ಯಕ್ತಪಡಿಸಿದ್ದರೆ. ಇನ್ನು ಕೆಲವರು ಇಷ್ಟೊಂದು ಖರ್ಚು ಮಾಡಿ ಅದು ಕೂಡ ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪಾದಯಾತ್ರೆ ನಡೆಸುವ ಅವಶ್ಯಕತೆ ಇತ್ತೇ ಎಂದು ಅಸಮಧಾನ ಹೊರಹಾಕಿದ್ದಾರೆ

ಬೃಹತ್ ಚುನಾವಣಾ ರ್ಯಾಲಿ ಗಳಿಗಿಂತ ಹೆಚ್ಚು ಹಣವನ್ನು ಖರ್ಚು ಮಾಡಿ ಪಾದಯಾತ್ರೆ ಆಯೋಜಿಸಲಾಗಿತ್ತು ಎಂದು ಅಚ್ಚರಿ ವ್ಯಕ್ತಪಡಿಸಿರುವುದಾಗಿ ಕನಕಪುರ ತಾಲ್ಲೂಕಿನ ಸ್ಥಳೀಯ ವ್ಯಕ್ತಿಯೊಬ್ಬರು ಹೇಳಿರುವುದಾಗಿ ಖಾಸಗಿ ಸುದ್ದಿ ಪತ್ರಿಕೆಯೊಂದು ವರದಿ ಮಾಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top