fbpx
ಸಮಾಚಾರ

ಕರ್ನಾಟಕ ಸರ್ಕಾರದಿಂದ ಬೃಹತ್ ನೇಮಕಾತಿ: 6406 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸರ್ಕಾರೀ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ​ -ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6406 ಹುದ್ದೆಗಳು ಖಾಲಿ ಇದ್ದು, ಪಿಯುಸಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿಗೆ ಸಮಭಿಸಿದ ವಿವರಗಳು ಈ ಕೆಳಗಿನಂತಿವೆ:

ಹುದ್ದೆಯ ಹೆಸರು:
ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ,
ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್

ಹುದ್ದೆಗಳಸಂಖ್ಯೆ:
ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ- 3827
ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ – 2579
ಒಟ್ಟು ಹುದ್ದೆಗಳು: 6406

ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡುವ ವೇತನ ಮಾಸಿಕವಾಗಿ ₹ 21,400-42,000

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು RDPR ಕರ್ನಾಟಕ ನೇಮಕಾತಿ ಮಾನದಂಡಗಳ ಪ್ರಕಾರ ಇರಬೇಕು. ( ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.)

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಹುದ್ದೆಯ ಕುರಿತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top