ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ದೇವೇಗೌಡ ಅವರು ಎರಡು ದಿನಗಳಿಂದ ಬಳಲುತ್ತಿದ್ದರು. ಕೊರೊನ ಸೋಂಕಿನ ಲಕ್ಷಣ ಕಂಡುಬಂದರಿಂದ ಅವರಿಗೆ ಕೊರೋನಾ ಟೆಸ್ಟ್ ಮಾಡಿಸಲಾಗಿತ್ತು. ಟೆಸ್ಟ್ ನಲ್ಲಿ ಅವರಿಗೆ ಪಾಸಿಟಿವ್ ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೂರವಾಣಿ ಕರೆ ಮಾಡಿ ದೇವೇಗೌಡರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಎಂದೂ ಮೂಲಗಳು ಹೇಳಿವೆ. ‘ಮಾಜಿ ಪ್ರಧಾನಮಂತ್ರಿಗಳು, ಹಿರಿಯರಾದ ಎಚ್.ಡಿ.ದೇವೇಗೌಡ ಅವರು ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಮಂತ್ರಿಗಳು, ಹಿರಿಯರಾದ ಶ್ರೀ @H_D_Devegowda ಅವರು ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.
— Basavaraj S Bommai (@BSBommai) January 22, 2022
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
